ತಿರುವನಂತಪುರ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಇದೇ 23ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ತಿರುವನಂತಪುರ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಇದೇ 23ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಸಹೋದರ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಿಯಾಂಕಾ ಅವರೊಂದಿಗೆ ಕೇರಳಕ್ಕೆ ಇದೇ 22ರ ಸಂಜೆ ಆಗಮಿಸಲಿದ್ದಾರೆ.
ರಾಹುಲ್ ಗಾಂಧಿ ಅವರು 2019ರಲ್ಲಿ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದ ಸ್ಪರ್ಧಿಸಿದ್ದರು. ಈ ವೇಳೆ ರಾಹುಲ್ ಅವರೊಂದಿಗೆ ಪ್ರಿಯಾಂಕಾ ಅವರು ರೋಡ್ ಶೊ ಹಾಗೂ ಹಲವು ರ್‍ಯಾಲಿಗಳನ್ನು ನಡೆಸಿದ್ದರು. ಆದರೆ, ಇದೇ ಮೊದಲ ಬಾರಿಗೆ ಪ್ರಿಯಾಂಕಾ ಅವರು ಸ್ವತಃ ತಾವೇ ಅಭ್ಯರ್ಥಿಯಾಗಲು ಕೇರಳಕ್ಕೆ ಆಗಮಿಸಲಿದ್ದಾರೆ.