ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ತಾಪಮಾನ ಕುಸಿದಿದ್ದು, ಶ್ರೀನಗರದಲ್ಲಿ ಕನಿಷ್ಠ 1.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಮೂಲಕ ಕಣಿವೆ ರಾಜ್ಯದಲ್ಲಿ ಋತುವಿನಲ್ಲಿ ಮೊದಲನೆ ಬಾರಿಗೆ ತಾಪಮಾನ ಕನಿಷ್ಠ ಮಟ್ಟಕ್ಕೆ ತಲುಪಿದೆ.
ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಸತತ ಮೂರನೇ ರಾತ್ರಿ ಶೂನ್ಯಕ್ಕಿಂತ ಕಡಿಮೆ ತಾಪಮಾನ ದಾಖಲಾಗಿದ್ದು, ಪಾದರಸವು ಘನೀಕರಿಸುವ ಹಂತ ತಲುಪಿದೆ.
ಖಾಜಿಗುಂಡ್‌ನಲ್ಲಿ ಕನಿಷ್ಠ 1.4 ಡಿಗ್ರಿ ಸೆಲ್ಸಿಯಸ್, ಪಹಲ್ಗಾಮ್ ಕಣಿವೆಯಲ್ಲಿ ಕನಿಷ್ಠ 2.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಸ್ಕೀಯಿಂಗ್‌ಗೆ ಪ್ರವಾಸಿಗರ ನೆಚ್ಚಿನ ತಾಣವಾದ ಗುಲ್ಮಾರ್ಗ್‌ನಲ್ಲಿ ಕನಿಷ್ಠ 0.6 ಡಿಗ್ರಿ ಸೆಲ್ಸಿಯಸ್ ಮತ್ತು ಕುಪ್ವಾರಾದಲ್ಲಿ ಕನಿಷ್ಠ 0.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿ ಶುಕ್ರವಾರದಿಂದ ಎರಡು ದಿನ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.