ಹೈದರಾಬಾದ್: ತೆಲಂಗಾಣದ ವಾರಂಗಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನಲ್ಲಿ ₹13.6 ಕೋಟಿ ಮೌಲ್ಯದ 19 ಕೆ.ಜಿ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್: ತೆಲಂಗಾಣದ ವಾರಂಗಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನಲ್ಲಿ ₹13.6 ಕೋಟಿ ಮೌಲ್ಯದ 19 ಕೆ.ಜಿ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯಪರ್ತಿ ಮಂಡಲದಲ್ಲಿರುವ ಬ್ಯಾಂಕ್ ಶಾಖೆಯ ಕಿಟಕಿಯನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ ಒಳನುಗ್ಗಿರುವ ದರೋಡೆಕೋರರು, 19.5 ಕೆ.ಜಿ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳ್ಳತನ ನಡೆದಿರುವ ಬಗ್ಗೆ ಬ್ಯಾಂಕ್ ಸಿಬ್ಬಂದಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಂಕ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾ ಹಾಳಾಗಿರುವುದು ದೃಢಪಟ್ಟಿದೆ. ಜತೆಗೆ, ಕಳ್ಳರು ಬ್ಯಾಂಕ್‌ನಿಂದ ಡಿಜಿಟಲ್ ವಿಡಿಯೊ ರೆಕಾರ್ಡರ್ (ಡಿವಿಆರ್) ತೆಗೆದುಕೊಂಡು ಹೋಗಿದ್ದಾರೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.