ಕ್ಯೆರೊ : ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ವಾರಾಂತ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ.
ಉತ್ತರ ಸುಮತ್ರಾ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಪ್ರಮಾಣವು ತೀವ್ರ ಹೆಚ್ಚಾಗಿದ್ದರಿಂದ ಸುಮತ್ರಾದ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ.
ಇದರಿಂದಾಗಿ ಹಲವು ಮನೆಗಳು ಕೊಚ್ಚಿ ಹೋಗಿದ್ದು, ಒಟ್ಟು 321 ಎಕರೆ ಕೃಷಿ ಭೂಮಿ ನಾಶವಾಗಿದೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಇದುವರೆಗೆ 16 ಮೃತದೇಹಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾಗಿರುವ 6 ಜನರಿಗಾಗಿ ಶೋಧ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.