ವಯನಾಡ್: ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ, ಸಿಪಿಐನ ಸತ್ಯನ್ ಮೊಕೇರಿ ಹಾಗೂ ಬಿಜೆಪಿಯ ನವ್ಯಾ ಹರಿದಾಸ್ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು ಬುಧವಾರ ಇಲ್ಲಿ ಮತದಾನ ನಡೆಯಲಿದೆ.
ವಯನಾಡ್: ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ, ಸಿಪಿಐನ ಸತ್ಯನ್ ಮೊಕೇರಿ ಹಾಗೂ ಬಿಜೆಪಿಯ ನವ್ಯಾ ಹರಿದಾಸ್ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು ಬುಧವಾರ ಇಲ್ಲಿ ಮತದಾನ ನಡೆಯಲಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ 3.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಈಗ ರಾಹುಲ್ ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಳ್ಳುವ ಉತ್ಸಾಹದಲ್ಲಿದೆ.
ಅತ್ತ ಬಿಜೆಪಿ ಹಾಗೂ ಸಿಪಿಐ ಪಕ್ಷಗಳು ಕಾಂಗ್ರೆಸ್‌ನಿಂದ ಈ ಕ್ಷೇತ್ರವನ್ನು ಕಸಿದುಕೊಳ್ಳುವ ತವಕದಲ್ಲಿದೆ. ಸೋಮವಾರ ಉಪಚುನಾವಣೆಯ ಪ್ರಚಾರಕ್ಕೆ ಕೊನೇ ದಿನವಾಗಿತ್ತು. ಮೂರೂ ಪ್ರಮುಖ ಪಕ್ಷಗಳು ಕೊನೇ ದಿನದ ಪ್ರಚಾರದಲ್ಲಿ ಭಾರಿ ರೋಡ್ ಶೋ ನಡೆಸಿದವು.