ನವದೆಹಲಿ: ಮಲಯಾಳಂ ಸಿನಿಮಾ ಕ್ಷೇತ್ರದ ಸಮಸ್ಯೆಗಳ ಅಧ್ಯಯನಕ್ಕೆ ನೇಮಿಸಿರುವ ನ್ಯಾಯಮೂರ್ತಿ ಹೇಮಾ ಸಮಿತಿ ಸಿದ್ಧಪಡಿಸಿರುವ ವರದಿ ಆಧರಿಸಿ, ದಾಖಲಾದ 18 ಪ್ರಕರಣಗಳ ಆರೋಪಿಗಳಿಗಾಗಿ ತೀವ್ರ ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರಕಾರ ಸುಪ್ರೀಂ ಕೋರ್ಟ್‍ಗೆ ಮಾಹಿತಿ ನೀಡಿದೆ.
ಎಂಟು ಪ್ರಕರಣಗಳ ಆರೋಪಿಗಳ ಹೆಸರನ್ನು ಎಫ್‍ಐಆರ್‍ನಲ್ಲಿ ದಾಖಲಿಸಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿದೆ. ವರದಿಯ ಆಧಾರದ ಮೇಲೆ ಒಟ್ಟು 40 ಘಟನೆಗಳಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈವರೆಗೆ 26 ಪ್ರಕರಣಗಳು ದಾಖಲಾಗಿವೆ. 10 ಘಟನೆಗಳಲ್ಲಿ ಪ್ರಾಥಮಿಕ ತನಿಖೆ ನಡೆಯುತ್ತಿದೆ.
ನಾಲ್ಕು ಪ್ರಕರಣಗಳು ದಾಖಲಾಗಿವೆ. ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಸಂತ್ರಸ್ತರಿಗೆ ಆಸಕ್ತಿ ಇಲ್ಲದಿದ್ದರೂ ಅಪರಾಧಿಗಳನ್ನು ಖುಲಾಸೆಗೊಳಿಸಲು ಸಾಧ್ಯವಿಲ್ಲ. ಹೇಮಾ ಸಮಿತಿ ವರದಿ ಆಧರಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕೇರಳ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ನಿರ್ಮಾಪಕ ಸಜಿಮೋನ್ ಪರಾಯಲ್ ಸಲ್ಲಿಸಿದ್ದ ಅರ್ಜಿಯಲ್ಲಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.