ನವದೆಹಲಿ: 2024ನೇ ಸಾಲಿನ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ನವದೆಹಲಿ: 2024ನೇ ಸಾಲಿನ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಸಂಸತ್ತಿನ ಕೆಳಮನೆ ಮತ್ತು ಮೇಲ್ಮನೆಯ ಅಧಿವೇಶವನ್ನು ನ.25ರಿಂದ ಡಿ.20ರವರೆಗೆ ನಡೆಸಲಾಗುವುದು. ನ.26 ರಂದು ಸಂವಿಧಾನ ದಿನವಾಗಿದೆ. ಭಾರತ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಈ ಸಂದರ್ಭದಲ್ಲಿ ಸಂವಿಧಾನ ಸದನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.