HEALTH TIPS

ಸಂಸತ್ ಚಳಿಗಾಲ ಅಧಿವೇಶನ: ವಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ನವೆಂಬರ್ 27ಕ್ಕೆ ಮುಂದೂಡಿಕೆ

ಅಧಿವೇಶನದ ಮೊದಲ ದಿನದಂದು ಸದನವು ಸಭೆ ಸೇರಿದ ತಕ್ಷಣ, ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಸ್ಕೆ ನೂರುಲ್ ಇಸ್ಲಾಂ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬಳಿಕ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ ವಾಗ್ವಾದ ಆರಂಭಗೊಂಡಿದ್ದರಿಂದ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನು ನ.27ಕ್ಕೆ ಮುಂದೂಡಲಾಯಿತು.

ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು ಮಂಡಿಸಲು ಮುಂದಾಗಿತ್ತು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತರಾತರಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮಸೂದೆಗಳನ್ನು ಮಂಡಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಈ ನುವೆ ಪ್ರತಿಪಕ್ಷಗಳು ಯಾವುದೇ ಮಸೂದೆ ಮಂಡನೆ ಮಾಡುವ ಮುನ್ನ ಮಣಿಪುರದಲ್ಲಿ ಮರುಕಳಿಸಿರುವ ಹಿಂಸಾಚಾರ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು. ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಗದ್ಧಲ ಸೃಷ್ಟಿಸಿದ್ದರಿಂದ ಸಭಾಪತಿ ಕಲಾಪವನ್ನು ಮುಂದೂಡಿದರು.

ನವೆಂಬರ್ 26ರ ಸಂವಿಧಾನ ದಿನ ಹಿನ್ನೆಲೆಯಲ್ಲಿ ಅಧಿವೇಶನ ನಡೆಸದಿರಲು ಹಾಗೂ ಉಭಯ ಸದನಗಳ ಸದಸ್ಯರೊಂದಿಗೆ ಸಂವಿದಾನ ಭವನದಲ್ಲಿ ಸಂವಿಧಾನ ದಿನವನ್ನು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries