ಕೋಲ್ಕತ್ತ: ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಕೋಲ್ಕತ್ತದ ಉದ್ಯಮಿಯೊಬ್ಬರ ನಿವಾಸದಲ್ಲಿ ₹3 ಕೋಟಿ ಹಣವನ್ನು ಜಾರಿ ನಿರ್ದೇಶನಾಲಯ ಇಂದು (ಶುಕ್ರವಾರ) ವಶಪಡಿಸಿಕೊಂಡಿದೆ.
ಕೋಲ್ಕತ್ತ: ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಕೋಲ್ಕತ್ತದ ಉದ್ಯಮಿಯೊಬ್ಬರ ನಿವಾಸದಲ್ಲಿ ₹3 ಕೋಟಿ ಹಣವನ್ನು ಜಾರಿ ನಿರ್ದೇಶನಾಲಯ ಇಂದು (ಶುಕ್ರವಾರ) ವಶಪಡಿಸಿಕೊಂಡಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವಿವಿಧೆಡೆ ತನಿಖಾ ಸಂಸ್ಥೆಯು ಗುರುವಾರದಿಂದ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇ.ಡಿ ಅಧಿಕಾರಿಗಳ ದಾಳಿಯ ವೇಳೆ ಉದ್ಯಮಿಯೊಬ್ಬರ ಮನೆಯಲ್ಲಿ ಅಂದಾಜು ₹3 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ನೋಟು ಎಣಿಕೆಯ ಪ್ರಕ್ರಿಯೆ ಮುಂದುವರಿದಿದೆ ಎಂದು ಇ.ಡಿ ಅಧಿಕಾರಿ ಹೇಳಿದ್ದಾರೆ.
ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ. ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯಮ್‌ಗ್ರಾಮ್‌ನ ಕಟ್ಟಡವೊಂದರಲ್ಲಿ ಲಾಟರಿ ಟಿಕೆಟ್‌ಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ ಎಂಬ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ತಮಿಳುನಾಡು ಸೇರಿದಂತೆ ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯಾಚರಣೆ ಕೈಗೊಂಡಿದೆ.