HEALTH TIPS

ದೆಹಲಿ ಗಾಳಿಯ ಗುಣಮಟ್ಟ 'ತೀವ್ರ ಕಳಪೆ': 418ಕ್ಕೆ ತಲುಪಿದ AQI ಸೂಚ್ಯಂಕ

 ವದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಬುಧವಾರ ತೀವ್ರ ಕಳಪೆ ಮಟಕ್ಕೆ ಕುಸಿದಿದೆ. ಈ ಋತುವಿನಲ್ಲಿ ಮೊದಲ ಬಾರಿಗೆ ಎಕ್ಯೂಐ ಸೂಚ್ಯಂಕ 418ಕ್ಕೆ ತಲುಪಿದೆ.

ರಾಷ್ಟ್ರ ರಾಜಧಾನಿಯ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ, ಪ್ರತಿದಿನ ಸಂಜೆ 4 ಗಂಟೆಗೆ ದಾಖಲಾಗುತ್ತದೆ.

ಮಂಗಳವಾರ ಎಕ್ಯೂಐ 334 ರಷ್ಟಿತ್ತು. ಬುಧವಾರ 418ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ದೆಹಲಿಯ 36 ಪರಿವೀಕ್ಷಣಾ ಕೇಂದ್ರಗಳ ಪೈಕಿ, 30 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಳಪೆ ದಾಖಲಾಗಿದೆ ಎಂದು ಸಿಪಿಸಿಬಿ ಹೇಳಿದೆ.

ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ 'ತೀವ್ರ ಕಳಪೆ' ಹಾಗೂ 450ಕ್ಕಿಂತ ಹೆಚ್ಚಾದರೆ 'ತೀವ್ರಕ್ಕಿಂತಲೂ ಅಪಾಯಕಾರಿ' ಎಂದು ಪರಿಗಣಿಸಲಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries