HEALTH TIPS

ಸುಪ್ರೀಂ ಕೋರ್ಟ್‌ನ 51ನೇ CJI ಆಗಿ ಪ್ರಮಾಣವಚನ ಸ್ವೀಕರಿಸಿದ ನ್ಯಾ.ಸಂಜೀವ್‌ ಖನ್ನಾ

 ವದೆಹಲಿ: ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್‌ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.‌

ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್‌ ಖನ್ನಾ ಏರಿದ್ದು, 2025ರ ಮೇ 13ರವರೆಗೆ ಅವರು ಸಿಜೆಐ ಆಗಿ ಅಧಿಕಾರದಲ್ಲಿ ಇರಲಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಪಡಿಸಿದ ತೀರ್ಪು, ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕ್ರಮವನ್ನು ಎತ್ತಿಹಿಡಿದ ತೀರ್ಪು ಸೇರಿದಂತೆ ಸುಪ್ರೀಂ ಕೋರ್ಟ್‌ ನೀಡಿದ ಹಲವು ಮಹತ್ವದ ತೀರ್ಪುಗಳಲ್ಲಿ ಖನ್ನಾ ಅವರ ಪಾಲು ಕೂಡ ಇದೆ.

ನ್ಯಾ. ಖನ್ನಾ ಅವರ ತಂದೆ ದೇವರಾಜ್‌ ಖನ್ನಾ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರು. ಅಲ್ಲದೆ ನ್ಯಾ. ಖನ್ನಾ ಅವರ ಚಿಕ್ಕಪ್ಪ ಎಚ್‌. ಆರ್‌. ಖನ್ನಾ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries