HEALTH TIPS

ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ

 

ಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಸೇರಿ ಕೆಲವು ಭಾಗಗಳಲ್ಲಿ ಬುಧವಾರ ಭೂಕಂಪವಾಗಿದೆ. ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 5.3ರಷ್ಟು ಇತ್ತು.

ಯುನೈಟೆಡ್ ಸ್ಟೇಟ್ಸ್‌ ಜಿಯಾಲಜಿಕಲ್ ಸರ್ವೆ (ಯುಎಸ್‌ಜಿಎಸ್‌) ಪ್ರಕಾರ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1ರಷ್ಟಿತ್ತು. ಆದರೆ, ಪಾಕಿಸ್ತಾನದ ಹವಾಮಾನ ಇಲಾಖೆಯು ಹೇಳುವಂತೆ, 5.3ರಷ್ಟು ತೀವ್ರತೆಯ ಭೂಕಂಪ ಆಗಿದೆ.

ಅಫ್ಗಾನಿಸ್ತಾನದ ಹಿಂದೂ ಕುಶ್ ಪರ್ವತ ಶ್ರೇಣಿಯು ಭೂಕಂಪದ ಕೇಂದ್ರ ಬಿಂದು ಎಂದು ಇಸ್ಲಾಮಾಬಾದ್‌ನ ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರವು ತಿಳಿಸಿದೆ. ಪಾಕಿಸ್ತಾನದ ಕಾಲಮಾನದಲ್ಲಿ ಬೆಳಿಗ್ಗೆ 10:13ಕ್ಕೆ ಭೂಕಂಪ ಸಂಭವಿಸಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿಯೂ ಕಂಪನದ ಅನುಭವವಾಗಿದೆ.

ಕಂಪನದ ಅನುಭವವಾದ ಕಡೆ ಜನರು ಮನೆಗಳಿಂದ ಹೊರಗೆ ಓಡಿಬಂದರು. ಆದರೆ, ಇದುವರೆಗೆ ಯಾವುದೇ ಸಾವು-ನೋವು ಆದ ವರದಿಗಳು ಬಂದಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries