HEALTH TIPS

ಇನ್‌ಸ್ಟಾಗ್ರಾಂನಲ್ಲಿ 56 ಲಕ್ಷ ಫಾಲೋವರ್ಸ್.. ಚುನಾವಣೆಯಲ್ಲಿ ಗಳಿಸಿದ್ದು 137 ಮತ!

ಮಹಾರಾಷ್ಟ್ರ: ಮಾಧ್ಯಮ, ಜನಪ್ರಿಯತೆ ಹಾಗೂ ಚುನಾವಣಾ ರಾಜಕಾರಣ.. ಇವುಗಳ ನಡುವೆ ವಿರೋಧಾಬಾಸಗಳನ್ನು ಸಾಕಷ್ಟು ಬಾರಿ ನೋಡಿದ್ದೇವೆ. ಇದಕ್ಕೆ ತಾಜಾ ಉದಾಹರಣೆ ಮಹಾರಾಷ್ಟ್ರ ಚುನಾವಣೆಯ ಈ ಒಂದು ಕ್ಷೇತ್ರದ ಫಲಿತಾಂಶ.

ಈ ಭಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವರಸೋವಾ ಕ್ಷೇತ್ರದಿಂದ ನಟ ಆಜಾಜ್ ಖಾನ್ ಎನ್ನುವರು ಸಂಸದ ಚಂದ್ರಶೇಖರ್ ಆಜಾದ್ ರಾವಣ ಅವರ 'ಆಜಾದ್ ಸಮಾಜ್ ಪಾರ್ಟಿ'ಯಿಂದ ಸ್ಪರ್ಧಿಸಿದ್ದರು.

ಸಾಕಷ್ಟು ಪ್ರಚಾರ ಮಾಡಿದ್ದರು. ವಿಶೇಷವೆಂದರೆ ನಟ ಆಜಾಜ್‌ಗೆ ಇನ್‌ಸ್ಟಾಗ್ರಾಂನಲ್ಲಿ 56 ಲಕ್ಷ (5.6M) ಫಾಲೋವರ್‌ಗಳಿದ್ದಾರೆ.

ಆದರೆ, ವಿಚಿತ್ರವೆಂದರೆ ಇಂದು ಪ್ರಕಟವಾದ ಮಹಾರಾಷ್ಟ್ರ ಚುನಾವಣಾ ಫಲಿತಾಂಶದಲ್ಲಿ ಆಜಾಜ್ ಅವರು ಕೇವಲ 139 ಮತಗಳನ್ನು ಪಡೆದಿದ್ದಾರೆ. ಫೇಸ್‌ಬುಕ್, ಎಕ್ಸ್‌ ಹಾಗೂ ಇತರ ಸಾಮಾಜಿಕ ಜಾಲತಾಣಗಲ್ಲಿಯೂ ಅವರು ಲಕ್ಷಾಂತರ ಫಾಲೋವರ್‌ಗಳನ್ನು ಹೊಂದಿದ್ದಾರೆ. ಅವರ ಜನಪ್ರಿಯತೆ ಚುನಾವಣೆಯಲ್ಲಿ ಲೆಕ್ಕಕ್ಕೆ ಬಂದಿಲ್ಲ. ಇದರಿಂದ ಆ ನಟ ಸಾಕಷ್ಟು ಮುಜುಗರಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್ ಭದ್ರಕೋಟೆಯಾಗಿರುವ ಪ್ರಸ್ತುತ ವರಸೋವಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹರೂನ್ ಖಾನ್ ಅವರು 58 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಆಜಾಜ್ ಅವರಿಗಿಂತಲೂ ಹತ್ತು ಪಟ್ಟು ಅಧಿಕ ಅಂದರೆ 1,222 ಮತಗಳು ನೋಟಾಕ್ಕೆ ಚಲಾವಣೆ ಆಗಿವೆ.

ಆಜಾಜ್ ಖಾನ್ ಅವರು ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಹೌದು. ಅನೇಕ ಚಿತ್ರಗಳಲ್ಲಿ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ತಾನೊಬ್ಬ ರಾಜಕಾರಣಿಯೂ ಹೌದು ಎಂದು ಅವರು ಬರೆದುಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries