ಮುಂಬೈ: ಮಹಾರಾಷ್ಟ್ರದಲ್ಲಿ ಚುನಾವಣೆ ಮಾದರಿ ನೀತಿಸಂಹಿತೆ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 6,382 ದೂರುಗಳನ್ನು ದಾಖಲಿಸಿಕೊಂಡು, ₹ 536 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮುಂಬೈ: ಮಹಾರಾಷ್ಟ್ರದಲ್ಲಿ ಚುನಾವಣೆ ಮಾದರಿ ನೀತಿಸಂಹಿತೆ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 6,382 ದೂರುಗಳನ್ನು ದಾಖಲಿಸಿಕೊಂಡು, ₹ 536 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯದಲ್ಲಿ ಅಕ್ಟೋಬರ್ 15ರಿಂದ ನೀತಿಸಂಹಿತೆ ಜಾರಿಗೆ ಬಂದಿದ್ದು, ಇಲ್ಲಿಯವರೆಗೂ 6,382 ದೂರುಗಳನ್ನು ಸ್ವೀಕರಿಸಲಾಗಿತ್ತು.
ಇಲ್ಲಿಯ ತನಕ ₹ 536 ಕೋಟಿ ಮೌಲ್ಯದ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಮದ್ಯ, ಡ್ರಗ್ಸ್, ಲೋಹದ ವಸ್ತುಗಳು, ಬಟ್ಟೆಗಳು, ಗೃಹ ಉಪಯೋಗಿ ಸರಕುಗಳು ಹಾಗೂ ನಗದು ಹಣ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ನ.20ರಂದು ಮತದಾನ ನಡೆಯಲಿದೆ. ನ.23ರಂದು ಫಲಿತಾಂಶ ಬರಲಿದೆ.