ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 700 ಕೆ.ಜಿ. ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದು, 8 ಮಂದಿ ಇರಾನ್ ಪ್ರಜೆಗಳನ್ನು ಬಂಧಿಸಿದ್ದಾರೆ.

'ಗುಪ್ತಚರ ದಳ ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ, 'ನಮ್ಮ ಅಧಿಕಾರಿಗಳು ವಿದೇಶಿ ಮಾದಕ ದ್ರವ್ಯ ಸಾಗಣೆಯನ್ನು ಪತ್ತೆ ಮಾಡಿ, ಅದನ್ನು ತಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಡ್ರಗ್ಸ್ ಮುಕ್ತ ಭಾರತದ ಯೋಜನೆಗೆ ಇದು ಪೂರಕವಾಗಿದೆ' ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.