ಬದಿಯಡ್ಕ: ಕ್ಯಾಂಪ್ಕೋ ಬದಿಯಡ್ಕ ಶಾಖೆಯಲ್ಲಿ 71ನೇ ರಾಷ್ಟ್ರೀಯ ಸಹಕಾರಿ ಸಪ್ತಾಹದ ಉದ್ಘಾಟನೆ ಗುರುವಾರ ನಡೆಯಿತು. ಕ್ಯಾಂಪ್ಕೋ ಉಪಾಧ್ಯಕ್ಷ ಶಂನಾ ಖಂಡಿಗೆ ಸಹಕಾರಿ ಧ್ವಜಾರೋಹಣಗೈದು ಉದ್ಘಾಟಿಸಿದರು. ವಿಕಸಿತ ಭಾರತದಲ್ಲಿ ಸಹಕಾರಿ ಕ್ಷೇತ್ರದ ಪಾತ್ರದ ಬಗ್ಗೆ ಮಾತನಾಡಿದರು.
ನಿರ್ದೇಶಕ ಪದ್ಮರಾಜ ಪಟ್ಟಾಜೆ, ಸಂಸ್ಥೆಯ ನೌಕರ ವೃಂದ, ಕೃಷಿಕ ಸದಸ್ಯರು ಪಾಲ್ಗೊಂಡಿದ್ದರು. ಪ್ರತಿವರ್ಷ ನ.14ರಿಂದ 20 ವರೆಗೆ ಸಹಕಾರಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ಶ್ಯಾಮ್ಪ್ರಶಾಂತ್ ವಂದಿಸಿದರು.