ಇಂಫಾಲ: ಮಣಿಪುರದಲ್ಲಿ ಚುನಾಯಿತ ಪ್ರತಿನಿಧಿಗಳ ಆಸ್ತಿಪಾಸ್ತಿಗೆ ಹಾನಿಯನ್ನುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನಿಖೆ ಪ್ರಗತಿಯಲ್ಲಿದ್ದು, ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 16ರಂದು ನಾಪತ್ತೆಯಾಗಿದ್ದ ಆರು ಮಂದಿಯ ಮೃತದೇಹಗಳು ಪತ್ತೆಯಾದ ಬೆನ್ನಲ್ಲೇ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದರು.
ಈ ಮೊದಲು ಶಾಸಕರು, ಸಚಿವರ ನಿವಾಸಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 25 ಮಂದಿಯನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಮಾಯಕರ ಹತ್ಯೆಯಿಂದ ಆಕ್ರೋಶಗೊಂಡ ಜನರು ಶಾಸಕರು, ಸಚಿವರ ಮನೆಗಳಿಗೆ ಬೆಂಕಿ ಹಚ್ಚಿದ್ದರು. ಬಳಿಕ ಕರ್ಫ್ಯೂ ಹೇರಲಾಗಿತ್ತು.