HEALTH TIPS

ಗಡಿಯಲ್ಲಿ ಉಗ್ರರ ನುಸುಳುವಿಕೆ: ಜಮ್ಮುವಿನ 9 ಕಡೆಗಳಲ್ಲಿ ಎನ್‌ಐಎ ದಾಳಿ

ಮ್ಮು: ಗಡಿಯಲ್ಲಿ ಭಯೋತ್ಪಾದಕರ ನುಸುಳುವಿಕೆ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಹಲವೆಡೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಇಂದು (ಗುರುವಾರ) ದಾಳಿ ನಡೆಸಿದೆ.

ರಿಯಾಸಿ, ಉಧಮ್‌ಪುರ ಹಾಗೂ ರಾಂಬನ್ ಸೇರಿದಂತೆ ಜಮ್ಮು ಪ್ರದೇಶದ ಒಂಬತ್ತು ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪಾಕಿಸ್ತಾನ ಮೂಲದ ಭಯೋತ್ಪಾದಕರ ನುಸುಳುವಿಕೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಿದ ಬಳಿಕ ಎನ್‌ಐಎ ಕಾರ್ಯಾಚರಣೆ ನಡೆಸುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಎನ್‌ಐಎಗೆ ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಸಾಥ್ ನೀಡಿದ್ದಾರೆ. ಭಯೋತ್ಪಾದನೆಗೆ ಸಂಬಂಧಿಸಿದ ಜಾಲವನ್ನು ಮಟ್ಟ ಹಾಕುವುದೇ ದಾಳಿ ಹಿಂದಿನ ಗುರಿಯಾಗಿದೆ.

ರಿಯಾಸಿ, ಡೋಡ, ಉಧಮ್‌ಪುರ, ರಂಬಾನ್ ಮತ್ತು ಕಿಶ್ತ್ವಾರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಎನ್‌ಐಎ ದಾಳಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries