HEALTH TIPS

ಭಿನ್ನಸಾಮರ್ಥ್ಯದವರಿಗೆ ಸಾರ್ವಜನಿಕ ಸ್ಥಳಗಳ ಸುಗಮ ಬಳಕೆಗೆ | ನೂತನ ಮಾನದಂಡ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಆದೇಶ

 ವದೆಹಲಿ:ಭಿನ್ನಸಾಮರ್ಥ್ಯದ ವ್ಯಕ್ತಿಗಳಿಗೆ ಸಾರ್ವಜನಿಕ ಸ್ಥಳಗಳ ಬಳಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮೂರು ತಿಂಗಳೊಳಗೆ ಕಡ್ಡಾಯ ಮಾನದಂಡಗಳನ್ನು ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ.

ಭಿನ್ನಸಾಮರ್ಥ್ಯದ ವ್ಯಕ್ತಿಗಳಿಗೆ ಸಾರ್ವಜನಿಕ ಸ್ಥಳಗಳ ಬಳಕೆ ಸುಗಮಗೊಳಿಸುವ ಕುರಿತಂತೆ 2017ರ ಡಿಸೆಂಬರ್ 15ರಂದು ನ್ಯಾಯಾಲಯವು ನೀಡಿದ್ದ ನಿರ್ದೇಶನಗಳ ಅನುಷ್ಠಾನದಲ್ಲಿ ಮಂದಗತಿಯುಂಟಾಗಿರುವುದಕ್ಕೆ ಪ್ರತಿಕ್ರಿಯೆಯಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಈ ಆದೇಶವನ್ನು ಜಾರಿಗೊಳಿಸಿದೆ.

ಭಿನ್ನಸಾಮರ್ಥ್ಯದ ವ್ಯಕ್ತಿಗಳಿಗೆ ಅರ್ಥಪೂರ್ಣವಾದ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳು ಲಭ್ಯವಾಗಬೇಕಾದ ಅಗತ್ಯವನ್ನು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನು ಕೂಡಾ ಒಳಗೊಂಡ ನ್ಯಾಯಪೀಠ ಪ್ರತಿಪಾದಿಸಿತು. ಸಾರ್ವಜನಿಕ ಸ್ಥಳಗಳಲ್ಲಿ ಭಿನ್ನಸಾಮರ್ಥ್ಯದವರಿಗೆ ಮೂಲಭೂತ ಸೌಕರ್ಯಗಳು ಸುಲಭವಾಗಿ ಲಭ್ಯವಾಗುವಂತಾಗಬೇಕೆಂದು ನ್ಯಾಯಾಲಯ ಪ್ರತಿಪಾದಿಸಿತು. ಅಲ್ಲದೆ ನೂತನವಾಗಿ ನಿರ್ಮಾಣಗೊಳ್ಳುವ ಎಲ್ಲ ಮೂಲಸೌಕರ್ಯಗಳು ನೂತನ ಮಾನದಂಡಗಳಿಗೆ ಅನುಗುಣವಾಗಿರಬೇಕೆಂದು ಅದು ಸೂಚಿಸಿತು.

ಈಗ ಅಸ್ತಿತ್ವದಲ್ಲಿರುವ ಭಿನ್ನಸಾಮರ್ಥ್ಯದ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯು, ಜಾರಿಯೋಗ್ಯವಾದ ಕಡ್ಡಾಯ ಮಾನದಂಡಗಳನ್ನು ಹೊಂದಿಲ್ಲವೆಂದು ನ್ಯಾಯಪೀಠವು ಅಭಿಪ್ರಾಯಿಸಿತು. 2024ರ ಡಿಸೆಂಬರ್ 15ರೊಳಗೆ ಮೊತ್ತವನ್ನು ಬಿಡುಗಡೆಗೊಳಿಸುವಂತೆಯೂ ಅದು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಗೆ ಆದೇಶಿಸಿತು ತನ್ನ ನಿರ್ದೇಶನಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸಾಧಿಸಲಾದ ಪ್ರಗತಿಯ ಕುರಿತು ತನಗೆ ವರದಿ ನೀಡುವಂತೆಯೂ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿತು.

ಈ ನೂತನ ಮಾನದಂಡಗಳನ್ನು ಅಭಿವೃದ್ಧಿಪಡಿಸುವಲ್ಲಿ ಕೇಂದ್ರ ಸರಕಾರಕ್ಕೆ ಸಹಕರಿಸುವ ಹೊಣೆಯನ್ನು ಹೈದರಾಬಾದ್‌ನ ಎನ್‌ಎಎಲ್‌ಎಸ್‌ಎಆರ್ ವಿವಿಯ ಭಿನ್ನಸಾವರ್ಥ್ಯ ಅಧ್ಯಯನ ಕೇಂದ್ರಕ್ಕೆ ವಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಭಿನ್ನಸಾಮರ್ಥ್ಯದ ವ್ಯಕ್ತಿಗಳಿಗೆ ಸಾರ್ವಜನಿಕ ಸ್ಥಳಗಳ ಬಳಕೆಯ ಕುರಿತಾದ ಭೂದೃಶ್ಯ (ಲ್ಯಾಂಡ್‌ಸ್ಕೇಪ್)ಸ್ಥಿತಿಗತಿಯಕುರಿತ ಅಂದಾಜು ವರದಿ ಸಿದ್ಧಪಡಿಸಿದ ಎನ್‌ಎಎಲ್‌ಎಸ್‌ಎಆರ್‌ನ ಮ್ಯಾನೇಜ್‌ಮೆಂಟ್ ಅಧ್ಯಯನ ಇಲಾಖೆಯ ಅಂಗವಾದ ಕಾರ್ಲ್‌ಟನ್ ಬಿಸಿನೆಸ್ ಸ್ಕೂಲ್ (ಸಿಬಿಎಸ್)ನ ಪರಿಶ್ರಮವನ್ನು ಸುಪ್ರೀಂಕೋರ್ಟ್ ಶ್ಲಾಘಿಸಿತು ಹಾಗೂ ಸಿಬಿಎಸ್‌ಗೆ 50 ಲಕ್ಷ ರೂ. ಪರಿಹಾರ ಧನ ನೀಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries