ಕೊಚ್ಚಿ: ಖಾಸಗಿತನಕ್ಕೆ ಧಕ್ಕೆಯಾಗದಂತೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಚಿತ್ರ ತೆಗೆಯುವುದನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಉತ್ತರ ಪರವೂರು ಮೂಲದ ಮಹಿಳೆಯೊಬ್ಬರ ಮನೆ ಮುಂದೆ ನಿಂತು ಅಶ್ಲೀಲ ವರ್ತನೆ ತೋರಿದ ಪ್ರಕರಣದಲ್ಲಿ ಛಾಯಾಗ್ರಾಹಕರೋರ್ವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಭಾಗಶಃ ರದ್ದುಗೊಳಿಸಿದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ಸಾರ್ವಜನಿಕ ಸ್ಥಳದಲ್ಲಿ ಅಥವಾ ಇತರರು ಇರುವ ಖಾಸಗಿ ಸ್ಥಳದಲ್ಲಿ ಚಿತ್ರಗಳನ್ನು ತೆಗೆಯುವುದು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಅದೇ ಸ್ಥಳದಲ್ಲಿ ಮಹಿಳೆಯ ಖಾಸಗಿ ಅಂಗಗಳು ಅಥವಾ ಖಾಸಗಿ ಭಾಗಗಳನ್ನು ಗುರಿಯಾಗಿಸಿ ಚಿತ್ರ ತೆಗೆಯುವುದು ಅಪರಾಧ ಎಂದು ನ್ಯಾಯಮೂರ್ತಿ ಎ. ಬದರುದ್ದೀನ್ ಸ್ಪಷ್ಟಪಡಿಸಿದ್ದಾರೆ.
ಆದರೆ ಆರೋಪಿಯು ಪ್ರಕರಣದಲ್ಲಿ ನಿರಪರಾಧಿಯೇ ಎಂಬುದನ್ನು ನಿರ್ಧರಿಸಲು ವಿಚಾರಣೆಯನ್ನು ಎದುರಿಸಬೇಕು ಎಂದು ನ್ಯಾಯಾಲಯವು ಗಮನಿಸಿದೆ.