ಕಾಸರಗೋಡು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಕಲ್ಯಾಣ ಚಟುವಟಿಕೆಗಳ ಕುರಿತು ಅತ್ಯುತ್ತಮ ವರದಿಗಿರುವ ಡಾ. ಬಿ.ಆರ್ ಅಂಬೇಡ್ಕರ್ ಮಾಧ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುದ್ರಣ, ದೃಶ್ಯ, ಶ್ರಾವ್ಯ ಮಾಧ್ಯಮಗಳ ಉತ್ತಮ ವರದಿಗಳಿಗೆ ಈ ಪ್ರಶಸ್ತಿ ನೀಡಲಾಗುವುದು. ಆಗಸ್ಟ್ 16, 2023 ರಿಂದ ಆಗಸ್ಟ್ 15, 2024 ರವರೆಗಿನ ಅವಧಿಯ ವರದಿಗಳು ಮತ್ತು ಕಾರ್ಯಕ್ರಮಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುವುದು. ನವೆಂಬರ್ 14 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಮುಖ್ಯ ಪ್ರಚಾರಾಧಿಕಾರಿ, ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆ, ಅಯ್ಯಂಕಾಳಿ ಭವನ, ಕನಕ ನಗರ, ವೆಳ್ಳಯಂಬಲಂ, ಕವಡಿಯಾರ್ ಅಂಚೆ, ತಿರುವನಂತಪುರ - 3 ಎಂಬ ವಿಳಾಸಕ್ಕೆ ಕಳುಹಿಸಿಕೊಡಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ www.scdd.kerala.gov.in ವೆಬ್‍ಸೈಟ್ ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ0471 2315375.