ಭಾರತದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಸ್ಕೂಟರ್ ಯಾವುದೆಂದು ಕೇಳಿದರೆ, ತಕ್ಷಣ ಬರುವ ಒಂದೇ ಒಂದು ಉತ್ತರ ಹೋಂಡಾ ಆಕ್ಟಿವಾ ಎಂದು. ಅಷ್ಟರಮಟ್ಟಿಗೆ ಈ ಸ್ಕೂಟರ್ ದೇಶೀಯ ಗ್ರಾಹಕರ ಮನಸ್ಸಿನಲ್ಲಿ ಮನೆ ಮಾಡಿದೆ. ಸದ್ಯ, ಹೋಂಡಾ ಮೋಟಾರ್‌ಸೈಕಲ್ ಕಂಪನಿ ನೂತನ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಮಾರಾಟಕ್ಕೆ ತರಲು ಸಿದ್ಧತೆ ನಡೆಸುತ್ತಿದೆ.
ಬೆಲೆ (Price): ನೂತನ ಹೋಂಡಾ ಆಕ್ಟಿವಾ ಇವಿ (Honda Activa EV) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ಪ್ರತಿಸ್ಪರ್ಧಿ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪೈಪೋಟಿ ನೀಡಲು ರೂ.1 ಲಕ್ಷದಿಂದ ರೂ.1.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ಬಹುತೇಕ 2025ರಲ್ಲಿ ಹೊಚ್ಚ ಹೊಸ ಇ-ಸ್ಕೂಟರ್ ಗ್ರಾಹಕರ ಕೈಸೇರಲಿದೆ.
ವಿನ್ಯಾಸ (Design): ಈ ಹೋಂಡಾ ಆಕ್ಟಿವಾ ಇವಿ ಅತ್ಯಾಧುನಿಕ ವಿನ್ಯಾಸ ಕೂಡ ಒಳಗೊಂಡಿರುವ ಸಾಧ್ಯತೆಯಿದ್ದು, ಪೆಟ್ರೋಲ್ ಚಾಲಿತ ಆಕ್ಟಿವಾಗೂ ಹೋಲಿಕೆಯಾಗಲಿದೆ. ಎಲ್‌ಇಡಿ ಹೆಡ್‌ಲ್ಯಾಂಪ್ ಹಾಗೂ ಫ್ಲಾಟ್ ಸೀಟನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಪರ್ಲ್ ಜುಬಿಲಿ ವೈಟ್ ಹಾಗೂ ಪ್ರೀಮಿಯಂ ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.
ಕಾರ್ಯಕ್ಷಮತೆ (Performance): ಹೊಚ್ಚ ಹೊಸ ಆಕ್ಟಿವಾ ಇವಿ 1.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಡುಯಲ್ ಬ್ಯಾಟರಿ ಪ್ಯಾಕ್ ಪಡೆದುಕೊಂಡಿರಬಹುದು ಎನ್ನಲಾಗಿದೆ. ಇದು 6 ಕೆಡಬ್ಲ್ಯೂ ಪೀಕ್ ಪವರ್ ಹೊರಹಾಕಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 100 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು. ಜೊತೆಗೆ 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ.
ಇದರ ಬ್ಯಾಟರಿ ಪ್ಯಾಕ್ ಶೇಕಡ 0 ರಿಂದ 75% ಚಾರ್ಜ್ ಆಗಲು ಕೇವಲ 3 ತೆಗೆದುಕೊಳ್ಳಲಿದೆ. ಪೂರ್ತಿ ಚಾರ್ಜ್ ಆಗುವುದಕ್ಕೆ ಮತ್ತಷ್ಟು ಹೆಚ್ಚಿನ ಸಮಯಾವಕಾಶ ಬೇಕಾಗಲಿದೆ ಎಂದು ಹೇಳಲಾಗಿದೆ. ನಾರ್ಮಲ್ & ಸ್ಪೋರ್ಟ್ ಸೇರಿದಂತೆ 3 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿರುವ ಸಾಧ್ಯತೆಯೂ ಇದೆ.
ವೈಶಿಷ್ಟ್ಯಗಳು (Features): ನೂತನ ಹೋಂಡಾ ಆಕ್ಟಿವಾ ಇವಿ 5-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹೊಂದಿರುವ ನಿರೀಕ್ಷೆಯಿದೆ. ಇದರ ಗರಿಷ್ಠ-ಶ್ರೇಣಿ ರೂಪಾಂತರ (ಟಾಪ್-ಎಂಡ್ ವೇರಿಯೆಂಟ್), 7-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಿರಬಹುದು ಎನ್ನಲಾಗಿದೆ. ಇದರೊಟ್ಟಿಗೆ ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಅನ್ನು ಹೊಂದಿರುವ ನಿರೀಕ್ಷೆಯಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension System & Braking System): ಈ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ಸ್ ಮತ್ತು ಹಿಂಭಾಗ (ರೇರ್) ಪ್ರಿಲೋಡ್ ಅಡ್ಜಸ್ಟಬಲ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿರಬಹುದು ಎನ್ನಲಾಗಿದೆ. ಸುರಕ್ಷತೆಗಾಗಿ ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಪಡೆದಿರುವ ಸಾಧ್ಯತೆಯಿದೆ.
ಇನ್ನು, ಶೀಘ್ರ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬರಲಿದೆ ಎನ್ನಲಾದ ಹೋಂಡಾ ಆಕ್ಟಿವಾ ಇವಿ ಮೇಲೆ ಗ್ರಾಹಕರ ನಿರೀಕ್ಷೆಗಳು ದುಪ್ಪಟಾಗಿವೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅಗ್ಗದ ಬೆಲೆ ಹಾಗೂ ಅತ್ಯಾಧುನಿಕ ವೈಶಿಷ್ಟ್ಯದೊಂದಿಗೂ ಬಿಡುಗಡೆಯಾಗಲಿದೆ. ಆದರೂ ಟಿವಿಎಸ್, ಓಲಾ, ಎಥರ್ ಹಾಗೂ ಬಜಾಜ್ ಕಂಪನಿಗಳಿಂದ ದೊಡ್ಡಮಟ್ಟದಲ್ಲಿ ಪೈಪೋಟಿಯನ್ನು ಎದುರಿಸಬೇಕಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.