ಥಾಣೆ: ಪತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ, ಮೊಬೈಲ್‌ನಲ್ಲಿ ವಿಡಿಯೊ ಮಾಡಿದ ಮಹಿಳೆಯೊಬ್ಬರ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಪದೇ ಪದೇ ಜಗಳವಾಡುತ್ತಿದ್ದರು.
ನವೆಂಬರ್ 20ರಂದು ರಾತ್ರಿ ಪತಿಯು(29) ಮನೆಯಲ್ಲಿನ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಈ ವೇಳೆ ಪತ್ನಿಯು ಅವರನ್ನು ತಡೆಯುವ ಬದಲು ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಮತ್ತು ಈ ಕೃತ್ಯವನ್ನು ವಿಡಿಯೊ ಮಾಡಿಕೊಂಡಿದ್ದಕ್ಕಾಗಿ ದೂರು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.