HEALTH TIPS

ಸಮಯ ಬಂದಾಗ ನೋಡೋಣ: ರಾಜಕೀಯ ಪ್ರವೇಶದ ಬಗ್ಗೆ ರಾಬರ್ಟ್‌ ವಾದ್ರಾ

ನವದೆಹಲಿ: ವಯನಾಡ್‌ ಲೋಕಸಭಾ ಉಪಚುನಾವಣೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಪತ್ನಿ ಪ್ರಿಯಾಂಕಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿರುವ ರಾಬರ್ಟ್ ವಾದ್ರಾ, ಪ್ರಿಯಾಂಕಾ ಅವರಿಗೆ ಬೆಂಬಲ ನೀಡಿದ ವಯನಾಡ್ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ವಾದ್ರಾ, 'ಸಂಸತ್ತಿನಲ್ಲಿದ್ದು ಜನರ ಸಮಸ್ಯೆಗಳಿಗೆ ಪ್ರಿಯಾಂಕಾ ಧ್ವನಿಯಾಗಬೇಕೆಂಬ ಆಸೆ ನನ್ನದಾಗಿತ್ತು. ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂಬ ಭರವಸೆಯೂ ಇದ್ದಿತ್ತು' ಎಂದರು.

ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ನಮ್ಮ ಮೇಲೆ ಜನರ ಪ್ರೀತಿಯನ್ನು ನೀವು ಕಾಣಬಹುದು. ಜನರಿಗಾಗಿ ನಾನು ಕೆಲಸ ಮಾಡುತ್ತಲೇ ಇದ್ದೇನೆ. ಹಾಗೆಂದ ಮಾತ್ರಕ್ಕೆ ಈಗಲೇ ಸಂಸತ್ತಿನಲ್ಲಿ ಇರಬೇಕೆಂದು ನಾನು ಬಯಸುವುದಿಲ್ಲ. ಇದೀಗ ಪ್ರಿಯಾಂಕಾ ಸಂಸತ್ತನ್ನು ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ. ಸಮಯ ಬಂದಾಗ ರಾಜಕೀಯ ಪ್ರವೇಶದ ಬಗ್ಗೆ ಯೋಚಿಸುತ್ತೇನೆ' ಎಂದರು.


ಜನರ ತೀರ್ಪನ್ನು ಗೌರವಿಸಬೇಕು'

ಮಹಾರಾಷ್ಟ್ರದಲ್ಲಿ ಎಂವಿಎ ಹಿನ್ನಡೆ ಅನುಭವಿಸಿದ್ದರ ಬಗ್ಗೆ ಮಾತನಾಡಿದ ಅವರು, 'ಜನರ ತೀರ್ಪನ್ನು ಗೌರವಿಸುವುದರ ಮೂಲಕ ಹಿನ್ನಡೆಗೆ ಏನು ಕಾರಣವೆಂಬುವುದನ್ನು ಕಂಡುಕೊಳ್ಳಬೇಕು. ಗೆದ್ದ ಪಕ್ಷಕ್ಕೆ ಬೆಂಬಲ ನೀಡುವುದರ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು' ಎಂದರು.

'ವಿವಿಧ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡ ಬಿಜೆಪಿ ಜಾರ್ಖಂಡ್‌ನಲ್ಲಿ ಆಡಳಿತ ಪಕ್ಷದ ನಾಯಕರಿಗೆ ಹಲವು ತೊಂದರೆಗಳನ್ನು ನೀಡಿತ್ತು. ಅದಾಗ್ಯೂ ಜಾರ್ಖಂಡ್‌ನ ಜನತೆ ಜೆಎಂಎಂ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ತಿಳಿಸುತ್ತೇನೆ' ಎಂದು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries