ನವದೆಹಲಿ: ಮಣಿಪುರದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಪತ್ರ ಮುಖೇನ ಒತ್ತಾಯಿಸಿದ್ದಾರೆ.
ನವದೆಹಲಿ: ಮಣಿಪುರದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಪತ್ರ ಮುಖೇನ ಒತ್ತಾಯಿಸಿದ್ದಾರೆ.
'ರಾಜ್ಯದ ಜನರು ಮತ್ತು ಅವರ ಆಸ್ತಿಪಾಸ್ತಿ ರಕ್ಷಣೆಗಾಗಿ ಕೂಡಲೇ ಮಧ್ಯ ಪ್ರವೇಶಿಸಬೇಕು.
ಎರಡು ಪುಟಗಳ ಪತ್ರದಲ್ಲಿ ಅವರು, 'ಮಣಿಪುರ ಸಂಘರ್ಷದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿ 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರಿಂದ ಲಕ್ಷಾಂತರ ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ. ಅವರೆಲ್ಲರೂ ತಮ್ಮ ಸೂರುಗಳನ್ನು ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ವಾಸಿಸುವಂತಾಗಿದೆ. ಜನರ ಸಂಕಟ ದಿನೇ ದಿನೇ ಹೆಚ್ಚುತ್ತಲೇ ಇದೆ' ಎಂದು ಹೇಳಿದ್ದಾರೆ.
'ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಮರುಸ್ಥಾಪಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸಂಪೂರ್ಣ ವಿಫಲವಾಗಿವೆ. ಜನರು ಸರ್ಕಾರಗಳ ಮೇಲಿನ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ' ಎಂದು ತಿಳಿಸಿದ್ದಾರೆ.
'ಮಣಿಪುರ ಜನರು 2023ರಿಂದಲೂ ಪ್ರಧಾನಿ ಭೇಟಿಗೆ ಆಗ್ರಹಿಸುತ್ತಿದ್ದಾರೆ. ಆದರೆ ಅವರು ಭೇಟಿ ನೀಡಿಲ್ಲ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 18 ತಿಂಗಳಲ್ಲಿ ಮೂರು ಬಾರಿ ಭೇಟಿ ನೀಡಿದ್ದಾರೆ. ನಾನು ಸಹ ಭೇಟಿ ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಘರ್ಷಪೀಡಿತ ರಾಜ್ಯಕ್ಕೆ ಭೇಟಿ ನೀಡಲು ನಿರಾಕರಿಸುತ್ತಿರುವುದು ಏಕೆ ಎಂಬುದು ಯಾರಿಗೂ ಅರ್ಥವಾಗದ ಸಂಗತಿ' ಎಂದಿದ್ದಾರೆ.