HEALTH TIPS

ವಕ್ಫ್ ಮಸೂದೆ: ಸಂಸದೀಯ ಸಮಿತಿಯ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿಯ ಕಾರ್ಯಾವಧಿಯನ್ನು ಮುಂದಿನ ವರ್ಷದ ಬಜೆಟ್ ಅಧಿವೇಶನದ ಕೊನೆಯ ದಿನದವರೆಗೆ ವಿಸ್ತರಿಸುವ ನಿರ್ಣಯವನ್ನು ಲೋಕಸಭೆ ಗುರುವಾರ ಅಂಗೀಕರಿಸಿತು.

ಸಮಿತಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಂಬಿಕಾ ಪಾಲ್ ಅವರು ಲೋಕಸಭೆಯಲ್ಲಿ ಮಂಡಿಸಿದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಸಮಿತಿಯ ಕರಡು ವರದಿ ಸಿದ್ಧವಾಗಿದೆ ಎಂದು ಪಾಲ್‌ ಅವರು ಹೇಳಿದ್ದರು. ಹೀಗಾಗಿ, ಬುಧವಾರ ನಡೆದ ಸಭೆಯಲ್ಲಿ ಸಮಿತಿಯಲ್ಲಿದ್ದ ವಿಪಕ್ಷಗಳ ಸದಸ್ಯರು ಪಾಲ್ ಅವರನ್ನು ತರಾಟೆಗೆ ತೆಗೆದುಕೊಂಡು, ಸಭಾ ತ್ಯಾಗ ಮಾಡಿದ್ದರು. ನಂತರ, ಪಾಲ್ ಮತ್ತು ಸಮಿತಿಯಲ್ಲಿನ ಬಿಜೆಪಿಯ ಸಂಸದರು ವಿರೋಧ ಪಕ್ಷದ ಸದಸ್ಯರ ಮನವೊಲಿಸಿ, ಲೋಕಸಭೆಗೆ ಸಮಿತಿಯು ತನ್ನ ವರದಿ ಸಲ್ಲಿಸಲು ನಿಗದಿಪಡಿಸಿದ್ದ ನವೆಂಬರ್ 29ರ ಗಡುವು ವಿಸ್ತರಿಸಲು ಮನವಿ ಮಾಡುವ ಒಮ್ಮತದ ತೀರ್ಮಾನವನ್ನು ಕೈಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries