ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಂದರ್ಭದಲ್ಲಿ ಯೋಧರು ನಾಗರಿಕರನ್ನು ಥಳಿಸಿದ್ದಾರೆ ಎಂಬ ಆರೋಪ ಕುರಿತು ಸೇನೆಯು ತನಿಖೆಗೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
'ಕಿಶ್ತ್ವಾರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರ ಚಲನವಲನಗಳ ಕುರಿತಾದ ಗುಪ್ತಚರ ಮಾಹಿತಿ ಆಧರಿಸಿ ನವೆಂಬರ್ 20ರಂದು ರಾಷ್ಟ್ರೀಯ ರೈಫಲ್ಸ್‌ನಿಂದ ಕಾರ್ಯಾಚರಣೆ ನಡೆಸಲಾಗಿತ್ತು.
ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಹಾಗೆಯೇ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಮುಂದುವರಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಭಯೋತ್ಪಾದಕರ ನುಸುಳುವಿಕೆ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಿಯಾಸಿ, ಉಧಮ್‌ಪುರ ಹಾಗೂ ರಾಂಬನ್ ಸೇರಿದಂತೆ ಜಮ್ಮು ಪ್ರದೇಶದ ಒಂಬತ್ತು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಗುರುವಾರ ದಾಳಿ ನಡೆಸಿತ್ತು.