ಡಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ಪುರೋಹಿತ (ಸನ್ಯಾಸಿ) ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ನಾಯಕ ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಬಂಧಿಸಲಾಗಿದೆ.
ರಾಜಧಾನಿಯಿಂದ 300 ಕೀ.ಮೀಟರ್ ದೂರದಲ್ಲಿರುವ ರಂಗಪುರದಲ್ಲಿ ಕೆಲ ದಿನಗಳ ಹಿಂದೆ ಹಿಂದೂ ಸಮುದಾಯದವರು ನಡೆಸಿದ ಪ್ರತಿಭಟನೆಗಳ ನಂತರ ಈ ಬಂಧನ ನಡೆದಿದೆ.
ಆದಾಗ್ಯೂ ಬಾಂಗ್ಲಾದ ಅಧಿಕಾರಿಗಳು ಈ ಬಂಧನವನ್ನು ದೃಢಪಡಿಸಿಲ್ಲ.
ಇಸ್ಕಾನ್ ಪ್ರತಿನಿಧಿ ರಾಧಾರಮಣ್ ದಾಸ್ ಅವರು ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಬಾಂಗ್ಲಾ ಪೊಲೀಸರು ಬಂಧಿಸಿ, ಅಜ್ಞಾತ ಸ್ಥಳಕ್ಕೆ ಕರೆದೊಯ್ಯದಿದ್ದಾರೆ ಎಂಬ ಆಘಾತಕಾರಿ ಸುದ್ದಿ ನನಗೆ ತಲುಪಿದೆ. ದಯವಿಟ್ಟು ಗಮನಿಸಿ, ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಭಾರತೀಯ ಹೈ ಕಮಿಷನ್ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಈ ವಾರದ ಆರಂಭದಲ್ಲಿ ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಹಿಂದೂಗಳನ್ನು ಗುರಿಯಾಗಿಸಿ ನಡೆಯುತ್ತಿದ್ದ ಹಿಂಸಾಚಾರ ವಿರೋಧಿಸಿ ತಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾದ ನಂತರ ಈ ಬಂಧನ ನಡೆದಿದೆ.
ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ ಬಗ್ಗೆ ಬಾಂಗ್ಲಾದೇಶಿ ಅಧಿಕಾರಿಗಳು ಅಧಿಕೃತ ಹೇಳಿಕೆ ನೀಡಿಲ್ಲ.