ನವದೆಹಲಿ: ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಿ. ಕೃಷ್ಣಕುಮಾರ್ ಅವರನ್ನು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ (ಹಿರಿಯ ನ್ಯಾಯಮೂರ್ತಿಗಳ ಸಮಿತಿ) ಸೋಮವಾರ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಸಿದ್ಧಾರ್ಥ ಮೃದುಲ್ ಅವರ ನಿವೃತ್ತಿಯ ಪರಿಣಾಮವಾಗಿ ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆ ತೆರವಾಗಲಿದೆ, ಹೀಗಾಗಿ ಅಲ್ಲಿಗೆ ಹೊಸ ನೇಮಕ ಆಗಬೇಕಿದೆ ಎಂದು ಕೊಲಿಜಿಯಂ ಹೇಳಿದೆ.
'ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು ಹಿಂದುಳಿದ ವರ್ಗಗಳಿಗೆ ಸೇರಿದವರು. ಅವರು ಸಿವಿಲ್, ಸಾಂವಿಧಾನಿಕ ಮತ್ತು ಸೇವಾ ವಿಷಯಗಳಲ್ಲಿ ಬಹಳ ಅನುಭವ ಹೊಂದಿದ್ದಾರೆ' ಎಂದು ಕೊಲಿಜಿಯಂ ಹೇಳಿದೆ.