ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದುಷ್ಕರ್ಮಿಗಳು ನಡೆಸಿದ ದಾಳಿ ಖಂಡನೀಯ ಎಂದು ಮಧೂರು ಕ್ಷೇತ್ರ ಪುನರ್ನಿರ್ಮಾಣ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ತಿಳಿಸಿದೆ. ಸ್ವಾಮೀಜಿ ಅವರ ಕಾರನ್ನೇ ಪ್ರತ್ಯೇಕವಾಗಿ ಕೇಂದ್ರೀಕರಿಸಿ ಆಕ್ರಮಿಸಿರುವುದು ಪೂರ್ವಯೋಜಿತ ಕೃತ್ಯವಾಗಿದೆ. ಸಮಾಜದ ಭಾವೈಕ್ಯತೆಗೆ ಸದಾ ಶ್ರಮಿಸುತ್ತಿರುವ ಸಂಪೂಜ್ಯರ ವಾಹನದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಮಿತಿ ಪದಾಧಿಕಾರಿಗಳು ಸಂಬಂಧಪಟ್ಟ ಪೆÇಲೀಸ್ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಎಡನೀರುಶ್ರೀಗಳು ಸಂಚರಿಸುತ್ತಿದ್ದ ವಾಹನದ ಮೇಲೆ ಕಿಡಿಗೇಡಿಗಳು ಬೋವಿಕ್ಕಾನದಲ್ಲಿ ದಾಳಿ ನಡೆಸಿದ್ದರು.
ಇಂದು ಪ್ರತಿಭಟನೆ:
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದುಷ್ಕರ್ಮಿಗಳು ನಡೆಸಿದ ದಾಳಿ ಖಂಡಿಸಿ ನ.5ರಂದು ಸಂಜೆ 5ಕ್ಕೆ ಬೋವಿಕ್ಕಾನ ಪೇಟೆಯಲ್ಲಿ ಸಮಸ್ತ ಹಿಂದೂ ಸಂಘಟನೆಗಳು, ದೇವಾಲಯದ ಭಕ್ತರು ಮತ್ತು ಸಮುದಾಯದ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಸಮಸ್ತ ಹಿಂದೂ ಭಕ್ತರು ಈ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾಜ ದ್ರೋಹಿ ಕೃತ್ಯದ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಪ್ರಕಟಣೆ ತಿಳಿಸಿದೆ.