ಕಾಸರಗೋಡು: ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ಹಾಗೂ ಕರ್ನಾಟಕ ನವ ನಿರ್ಮಾಣ ಸೇನೆಯ ಜಂಟಿ ಸಹಯೋಗದೊಂದಿಗೆ'ಕಾಸರಗೋಡು ಕನ್ನಡ ರಾಜ್ಯೋತ್ಸವ-ಕನ್ನಡ ಹಬ್ಬ'ಕಾರ್ಯಕ್ರಮ ನ. 23ರಂದು ಸಂಜೆ 4.30ಕ್ಕೆ ಕಾಸರಗೋಡು ಅಡ್ಕತ್ತಬೈಲು ಉಡುಪಿ ಗಾರ್ಡನ್‍ನ 'ಮಥುರಾ ಸಭಾಂಗಣ'ದಲ್ಲಿ ಜರುಗಲಿದೆ.
ಕಾರ್ಯಕ್ರಮದ ಪೂರ್ವಭಾವಿಯಾಗಿ ಮೋಹನ ಆಚಾರ್ಯ ಪುಳ್ಕೂರು, ದಿವಾಕರ ಪಿ.ಅಶೋಕನಗರ ಮತ್ತು ಬಳಗದವರಿಂದ ಕನ್ನಡ ನಾಡಗೀತೆ ಸಮೂಹ ಗಾಯನ ಕಾರ್ಯಕ್ರಮ ನಡೆಯುವುದು. ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡುವರು. ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಭೀಮಶಂಕರ ಪಾಟೀಲ್ ಅಧ್ಯಕ್ಷತೆ ವಹಿಸುವರು. ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಿತಿ ಸದಸ್ಯೆ ಎಂ.ಎಲ್ ಅಶ್ವಿನಿ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್‍ನಾರಾಯಣ್ ತೊಟ್ಟೆತ್ತೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಈ ಸಂದರ್ಭ 'ಕಾಸರಗೋಡಿನ ಕನ್ನಡಿಗರ ಸಮಕಾಲೀನ ಸಮಸ್ಯೆಗಳು'ವಿಷಯದ ಬಗ್ಗೆ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಚಿಂತನೆ ನಡೆಸುವರು. ಕರ್ನಾಟಕ ನವ ನಿರ್ಮಾಣ ವಏದಿಕೆ ರಾಜ್ಯ ಸಮಿತಿ ಪದಾಧಿಕಾರಿಗಳು, ಮಹಿಳಾ ಘಟಕ ಪದಾಧಿಕಾರಿಗಳು ಪಾಲ್ಗೊಳ್ಳುವರು.