ತಿರುವನಂತಪುರಂ: ಎಡಿಜಿಪಿ ಎಂಆರ್ ಅಜಿತ್ ಕುಮಾರ್ ಅವರಿಗೆ ಪೆÇಲೀಸ್ ಪದಕ ಸದ್ಯಕ್ಕೆ ನೀಡಲಾಗುವುದಿಲ್ಲ. ಆರೋಪಗಳ ಬಗ್ಗೆ ತನಿಖೆ ನಡೆಯುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶುಕ್ರವಾರ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಇರುವುದರಿಂದ ಪದಕ ನೀಡಬಾರದು ಎಂದು ಡಿಜಿಪಿ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದರು.
ಪದಕ ಘೋಷಣೆಯಾದರೂ ತನಿಖಾಧಿಕಾರಿಗೆ ಪದಕ ನೀಡಿಲ್ಲ. ತ್ರಿಶೂರ್ ಪೂರಂ ಅವ್ಯವಹಾರ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹೊಣೆ ಹೊತ್ತಿದ್ದ ಎಡಿಜಿಪಿ ಅಜಿತ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿತ್ತು.