ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ಜನಾಂಗದ ಧೀರನಾದ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಆಚರಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾರ ಉಪಕುಲಪತಿ ಪೆÇ್ರ. ವಿನ್ಸೆಂಟ್ ಮ್ಯಾಥ್ಯೂ ಸಮಾರಂಭ ಉದ್ಘಾಟಿಸಿ ಬಿರ್ಸಾಮುಂಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಬುಡಕಟ್ಟು ಜನಾಂಗದ ಹೋರಾಟವನ್ನು ಹೊಸತಲೆಮರಿಗೆ ತಲುಪಿಸುವ ಕೆಲಸ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಪ್ರಭಾರಿ ರಿಜಿಸ್ಟ್ರಾರ್ ಪೆÇ್ರ. ರಾಜೇಂದ್ರ ಪಿಲಾಂಗಟ್ಟೆ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಆರ್. ಜಯಪ್ರಕಾಶ್, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಈ ಸಂದರ್ಭ ಉಪಕುಲಪತಿಗಳ ನೇತೃತ್ವದಲ್ಲಿ ಕ್ಯಾಂಪಸ್ ವಠಾರದಲ್ಲಿ ಸಸಿಗಳನ್ನು ನೆಡಲಾಯಿತು.
ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಬುಡಕಟ್ಟು ಹೆಮ್ಮೆಯ ದಿನವನ್ನಾಗಿ ರಾಷ್ಟ್ರವು ಆಚರಿಸುತ್ತಿದ್ದು, ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ವತಿಯಿಂದ ರಾಷ್ಟ್ರವ್ಯಾಪಕವಾಗಿ ನಡೆಯುತ್ತಿರುವ ಕಾರ್ಯಕ್ರಮದ ಅಂಗವಾಗಿ ಸಮಾರಂಭ ಆಯೋಜಿಸಲಾಗಿತ್ತು. ಶನಿವಾರ ಆಯಂಬರ ಕಲಿದುಕ್ಕಂನಲ್ಲಿ ವೈದ್ಯಕೀಯ ಶಿಬಿರ ನಡೆಯಲಿದೆ. ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಮ್ಮ ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.