ಬದಿಯಡ್ಕ: ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ಬುಧವಾರ ಬದಿಯಡ್ಕ ವಳಮಲೆಯ ಇರಾ ಸಭಾ ಭವನದಲ್ಲಿ ನಡೆದ ಡಾ.ಪಿ.ವೆಂಕಟರಾಜ ಪುಣಿಚಿತ್ತಾಯರ ‘ಪುವೆಂಪು ನೆನಪು’ ಸಮಾರಂಭದಲ್ಲಿ ಹಿರಿಯ ವಿದ್ವಾಂಸ, ಯಕ್ಷಗಾನ ಅಥರ್Àಧಾರಿ ಬೆಳ್ಳಿಗೆ ನಾರಾಯಣ ಮಣಿಯಾಣಿ ಅವರಿಗೆ ಕರ್ನಾಟಕ ಗಡಿ ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೊಡಮಾಡುವ ವಿಶಿಷ್ಟ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ , ಹಿರಿಯ ಸಾಹಿತಿ, ಕವಿ, ನಿವೃತ್ತ ಉಪನ್ಯಾಸಕ ವಿ.ಬಿ.ಅರ್ತಿಕಜೆ, ಕಸಾಪ ದ.ಕ.ಮಾಜಿ ಜಿಲ್ಲಾಧ್ಯಕ್ಷ, ಕಲ್ಕೂರ ಪ್ರತಿಷ್ಠಾನದ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಪ್ರಾಧ್ಯಾಪಕ, ಸಂಶೋಧಕ ಡಾ.ರಾಧಾಕೃಷ್ಣ ಬೆಳ್ಳೂರು, ಬದಿಯಡ್ಕ ಗ್ರಾ.ಪಂ.ಅಧ್ಯಕ್ಷೆ ಶಾಂತಾ ಬಿ., ಶ್ರೀಮದ್.ಎಡನೀರು ಮಠದ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಕಲ್ಲೂರಾಯ, ಕರ್ನಾಟಕ ಗಡಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.