ನವದೆಹಲಿ: ಗೌತಮ್ ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಸಿಪಿಐ(ಎಂ) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ನರೇಂದ್ರ ಮೋದಿ ಸರ್ಕಾರ ಇನ್ನು ಪರದೆಯ ಹಿಂದೆ ತಲೆಮರೆಸಿಕೊಳ್ಳಲು ಸಾಧ್ಯವಿಲ್ಲ, ಕೂಡಲೇ ಈ ಪ್ರಕರಣವನ್ನು ತನಿಖೆಗೆ ಕೇಂದ್ರ ಸರ್ಕಾರ ಸಿಬಿಐಗೆ ವಹಿಸಬೇಕು ಎಂದು ಹೇಳಿದೆ.
ಅಮೆರಿಕದ ಕೋರ್ಟ್ ಬಂಧನದ ವಾರೆಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಸಿಬಿಐ ತಕ್ಷಣವೇ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಸಿಪಿಐ (ಎಂ) ಒತ್ತಾಯಿಸಿದೆ. ಸರ್ಕಾರದ ಅಧಿಕಾರಿಗಳು ಲಂಚ ಪಡೆದಿರುವ ಪ್ರಕರಣ ಅಮೆರಿಕದಲ್ಲಿ ಬಹಿರಂಗವಾಗಿರುವುದು ದೇಶಕ್ಕೆ ಅವಮಾನವಾದಂತಗಿದೆ ಎಂದು ಅದು ಹೇಳಿದೆ.
ಆದರೆ, ಅದಾನಿ ಗುಂಪು ಈ ಆರೋಪಗಳನ್ನು ತಳ್ಳಿಹಾಕಿದೆ.