HEALTH TIPS

ಶಿಕ್ಷಣ ಸೇವೆ ಪವಿತ್ರ ಕಾರ್ಯ-ಕಾಸರಗೋಡು ಜಾಮಿಯಾ ಸ-ಆದಿಯ 'ಕ್ವೀನ್ಸ್ ಲ್ಯಾಂಡ್ ' ಹಾಸ್ಟೆಲ್ ಕಟ್ಟಡ ಉದ್ಘಾಟಿಸಿ ಸಚಿವ ಜಮೀರ್ ಅಹಮದ್ ಖಾನ್ ಅಭಿಪ್ರಾಯ

ಕಾಸರಗೋಡು: ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಅವರು ಕಾಸರಗೋಡು ದೇಳಿಯ ಜಾಮಿಯಾ ಸ-ಆದಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ 'ಕ್ವೀನ್ಸ್ ಲ್ಯಾಂಡ್' ಹಾಸ್ಟೆಲ್ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸಮುದಾಯಕ್ಕೆ ಉತ್ತಮ ಶಿಕ್ಷಣ ನೀಡುವುದು ಪವಿತ್ರ ಕಾರ್ಯಗಳಲ್ಲಿ ಒಂದಾಗಿದೆ. ಜಾಮಿಯಾ ಸ-ಆದಿಯ ಸಂಸ್ಥೆ ಎಂಟು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣ ದವರೆಗೆ ಶಿಕ್ಷಣ ವ್ಯವಸ್ಥೆ ಕಲ್ಪಿಸಿರುವುದು ಶ್ಲಾಘನೀಯ. ಇಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಿ ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಎಪಿ ಉಸ್ತಾದ್ ಅವರ ಮಾರ್ಗದರ್ಶನದಲ್ಲಿ ಈ ಸಂಸ್ಥೆ ಮತ್ತಷ್ಟು ಶಿಕ್ಷಣ ಸೇವೆ ನಡೆಸುವಂತಾಗಲಿ ಎಂದು ಹಾರೈಸಿದರು.


ಕರ್ನಾಟಕ ದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬಜೆಜ್ ನಲ್ಲಿ 540 ಕೋಟಿ ರೂ. ಶಿಕ್ಷಣಕ್ಕೆ ಮೀಸಲಿಟ್ಟಿದ್ದೇವೆ. ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್, ವಿದೇಶಿ ವ್ಯಾಸಂಗಕ್ಕೂ 20 ಲಕ್ಷ ರೂ. ವರೆಗೆ ನೆರವು ನೀಡುತ್ತಿದ್ದೇವೆ ಎಂದು ತಿಳಿಸಿದರು.


ಮಾಜಿ ಸಚಿವ ಸಿ. ಟಿ. ಅಹಮ್ಮದಾಲಿ,  ಬಾದಷಾ ಶಾಕಾಫಿ, ಮೌಲಾನಾ ಶಾಫಿ ಸಅದಿ, ನೌಫಲ್, ಅಬೂಬಕರ್ ಹಾಜಿ, ಮಹಮ್ಮದಲಿ ಸಕಾಫಿ, ಮಾಹಿನ್ ಹಾಜಿ, ಹುಸೇನ್ ಸಯಿದಿ, ಜಿ.ಎ ಬಾವಾ ಉಪಸ್ಥಿತರಿದ್ದರು.





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries