HEALTH TIPS

ವಕ್ಫ್‌ ಮಸೂದೆ: ಪಾಲ್‌ ವಿರುದ್ಧ ಪ್ರತಿಭಟನೆ ದಾಖಲಿಸಿದ ವಿಪಕ್ಷ ಸಂಸದರು

          ವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಸಂಸದೀಯ ಸಮಿತಿಯಲ್ಲಿನ ವಿರೋಧ ಪಕ್ಷದ ಸದಸ್ಯರು ಮಂಗಳವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಂಬಿಕಾ ಪಾಲ್ ಅವರು ತೆಗೆದುಕೊಳ್ಳುತ್ತಿರುವ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

       ಸದಸ್ಯರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ಸ್ಪೀಕರ್ ಓಂ ಬಿರ್ಲಾ ಅವರು, ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

        'ಸ್ಪೀಕರ್ ಅವರು ತುಂಬಾ ತಾಳ್ಮೆಯಿಂದ ನಮ್ಮ ಮಾತುಗಳನ್ನು ಆಲಿಸಿದ್ದಾರೆ. ಅಲ್ಲದೆ, ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ' ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ತಿಳಿಸಿದರು.

           ಸ್ಪೀಕರ್‌ ಭೇಟಿ ಫಲಪ್ರದವಾಗಿತ್ತು. ನಮ್ಮ ಕುಂದುಕೊರತೆಗಳನ್ನು ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಡಿಎಂಕೆ ಸಂಸದ ಎ. ರಾಜಾ ಹೇಳಿದರು.

              ಮೂಲಗಳ ಪ್ರಕಾರ, ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ಡಿಎಂಕೆಯ ಎ. ರಾಜಾ, ಎಐಎಂಐಎಂನ ಅಸಾದುದ್ದೀನ್ ಓವೈಸಿ, ಎಎಪಿಯ ಸಂಜಯ್ ಸಿಂಗ್ ಮತ್ತು ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಸೇರಿದಂತೆ ವಿರೋಧ ಪಕ್ಷದ ಸಂಸದರು ಸಹಿ ಮಾಡಿದ ಪತ್ರವನ್ನು ಸಂಸದರು ಸ್ಪೀಕರ್‌ಗೆ ಸಲ್ಲಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries