ಕಾಸರಗೋಡು: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಕೆಪಿಎ) 40ನೇ ಕಾಸರಗೋಡು ಜಿಲ್ಲಾ ಸಮ್ಮೇಳನ ನವೆಂಬರ್ 22 ರಂದು ಕುಂಬಳೆ ಗೋಪಾಲಕೃಷ್ಣ ಆಡಿಟೋರಿಯಂನಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ, 9.30 ಕ್ಕೆ ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಎಕೆಎಂ ಅಶ್ರಫ್ ಉದ್ಘಾಟಿಸುವರು.
ಬೆಳಗ್ಗೆ 10 ಗಂಟೆಗೆ ನಡೆಯುವ ಸಾರ್ವಜನಿಕ ಸಭೆಯನ್ನು ಸಾಹಿತಿ ಅಂಬಿಕಾಸುತನ್ ಮಾಞËಡ್ ಉದ್ಘಾಟಿಸುವರು. ಖ್ಯಾತ ಸಾಹಿತಿ ಕೆ.ಸಿ.ಅಬ್ರಹಾಂ ಅಧ್ಯಕ್ಷತೆ ವಹಿಸುವರು. ಸಾಹಿತಿ ಎಕೆಪಿಎ ರಾಜ್ಯಾಧ್ಯಕ್ಷ ಎ.ಸಿ.ಜಾನ್ಸನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ರಾಜ್ಯ ಕಾರ್ಯದರ್ಶಿ ಹರೀಶ್ ಪಾಲಕುನ್ನು, ರಾಜ್ಯ ಸಮಿತಿ ಸದಸ್ಯ ಪ್ರಶಾಂತ್ ಕೆವಿ, ಸುಗುಣನ್ ಇರಿಯ, ಸುನೀಲಕುಮಾರ್ ಪಿಟಿ ಮತ್ತಿತರರು ಸಮಾವೇಶದಲ್ಲಿಪಾಲ್ಗೊಳ್ಳುವರು. ಕಾರ್ಯಕ್ರಮದ ಪೂರ್ವಭಾವಿಯಾಗಿ ಪೇಟೆಯಲ್ಲಿ ಮೆರವಣಿಗೆ ನಡೆಯುವುದು ನಡೆಯಲಿದೆ.