ಮುಳ್ಳೇರಿಯ: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಗಳ ವಾಹನದ ಮೇಲೆ ದಾಳಿ ನಡೆಸಿದವರ ಕೇಸು ದಾಖಲಿಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಹಿಂದೂ ಐಕ್ಯವೇದಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜನ್ ಮುಳಿಯಾರ್ ಅವರ ನೇತೃತ್ವದಲ್ಲಿ ಆದೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.
ಆರೋಪಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ, ಹಿಂದೂ ಐಕ್ಯವೇದಿ ವತಿಯಿಮದ ಜಿಲ್ಲಾದ್ಯಂತ ಪ್ರಬಲ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.