'ನಿನ್ನೆ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದಲ್ಲಿ ಉಗ್ರಗಾಮಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಎಲ್ಲಾ ಪೂಜಾ ಸ್ಥಳಗಳನ್ನು ಇಂತಹ ದಾಳಿಗಳಿಂದ ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ಕೆನಡಾ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ' ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಂಧೀರ್ ಜೈಸ್ವಾಲ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಬ್ರಾಂಪ್ಟನ್‌ನಲ್ಲಿ ಖಾಲಿಸ್ತಾನಿಗಳ ದಾಳಿಯ ಬಗ್ಗೆ ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗೆ ಈ ಪ್ರತಿಕ್ರಿಯೆ ಎಂದು ಅವರು ಬರೆದುಕೊಂಡಿದ್ದಾರೆ.
'ಕೆನಡಾದಲ್ಲಿರುವ ಭಾರತದ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ನಾವು ಕಾಳಜಿ ಹೊಂದಿದ್ದೇವೆ. ಭಾರತೀಯರು ಮತ್ತು ಕೆನಡಾದ ನಾಗರಿಕರಿಗೆ ಸಮಾನವಾಗಿ ಸೇವೆಗಳನ್ನು ಒದಗಿಸಲು ನಮ್ಮ ರಾಯಭಾರ ಅಧಿಕಾರಿಗಳ ಕೆಲಸವನ್ನು ಯಾವುದೇ ಬೆದರಿಕೆ, ಕಿರುಕುಳ ಮತ್ತು ಹಿಂಸಾಚಾರದಿಂದ ತಡೆಯಲು ಆಗುವುದಿಲ್ಲ' ಎಂದು ಹೇಳಿದ್ದಾರೆ.