ಕಾಸರಗೋಡು: ಪರಪ್ಪ ಮಾಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಪ್ರದೇಶದ ಜನರಲ್ಲಿ ಮತ್ತೆ ಆತಂಕದ ವಾತಾವರಣ ಮನೆಮಾಡಿದೆ. ಇಲ್ಲಿನ ನಿವಾಸಿ, ಆಟೋರಿಕ್ಷಾ ಚಾಲಕ ಸುಮೇಶ್ ತಮ್ಮ ಆಟೋರಿಕ್ಷಾದಲ್ಲಿ ಸಂಚರಿಸುತ್ತಿದ್ದಾಗ ಚಿರತೆ ರಸ್ತೆ ಅಡ್ಡದಾಟಿ ಕಾಡಿನೊಳಗೆ ಪ್ರವೇಶಿಸಿರುವುದನ್ನು ಗಮನಿಸಿ, ಊರವರಿಗೆ ಮಾಹಿತಿ ನೀಡಿದ್ದಾರೆ. ಪರಪ್ಪ ನಿವಾಸಿಗಳು ನೀಡಿದ ಮಾಹಿತಿಯನ್ವಯ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಕಳೆದ ಹಲವು ಸಮಯದಿಂದ ಇರಿಯಣ್ಣಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ವದಂತಿ ಹರಡಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೋನು ಇರಿಸಿ ಚಿರತೆ ಸೆರೆಹಿಡಿಯಲು ಯತ್ನಿಸಿದ್ದರೂ, ಚಿರತೆ ಸೆರೆಹಿಡಿಯಲು ಸಾಧ್ಯವಾಗಿರಲಿಲ್ಲ.