ಮುಂಬೈ: ನಾಗ್ಪುರದಲ್ಲಿ ಕಲ್ಲು ತೂರಾಟದಿಂದ ಗಾಯಗೊಂಡ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಬಿಜೆಪಿಗೆ ತಕ್ಕ ಪಾಠ ಕಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಮುಂಬೈ: ನಾಗ್ಪುರದಲ್ಲಿ ಕಲ್ಲು ತೂರಾಟದಿಂದ ಗಾಯಗೊಂಡ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಬಿಜೆಪಿಗೆ ತಕ್ಕ ಪಾಠ ಕಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಕಲ್ಲು ತೂರಾಟ ಘಟನೆಯನ್ನು ಎನ್‌ಸಿಪಿಯ (ಎಸ್‌ಪಿ) ರಾಜಕೀಯ ಗಿಮಿಕ್ ಎಂದು ಬಿಜೆಪಿ ಹೇಳಿದೆ.
ನಾಗ್ಪುರ ಜಿಲ್ಲೆಯ ಕಾಟೋಲ್-ಜಲಾಲ್‌ಖೇಡ ರಸ್ತೆಯಲ್ಲಿ ನಡೆದಿದೆ ಎನ್ನಲಾದ ಕಲ್ಲು ತೂರಾಟದಲ್ಲಿ ದೇಶಮುಖ್ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಪೊಲೀಸರು ಘಟನೆ ಸಂಬಂಧ ನಾಲ್ವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಘಟನೆಯನ್ನು ರಾಜಕೀಯ ಗಿಮಿಕ್ ಎಂದು ಬಿಜೆಪಿ ಕರೆದರೆ ಎನ್‌ಸಿಪಿಯ (ಎಸ್‌ಪಿ) ನಾಯಕರು ಘಟನೆಯನ್ನು ಖಂಡಿಸಿದ್ದಾರೆ.
ದೇಶಮುಖ್ ಪುತ್ರ ಸಾಲಿಲ್ ವಿರುದ್ಧ ಬಿಜೆಪಿಯ ಬಾಬುಲಾಲ್‌ಜಿ ಠಾಕೂರ್ ಸ್ಪರ್ಧಿಸುತ್ತಿದ್ದಾರೆ.