ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಸಂಘರ್ಷಕ್ಕೆ ಕಾರಣವಾಗಿದ್ದ ಎರಡು ಪ್ರದೇಶಗಳಲ್ಲಿ ಭಾರತೀಯ ಹಾಗೂ ಚೀನಾ ದೇಶಗಳ ಯೋಧರ ವಾಪಸಾತಿ ಪ್ರಕ್ರಿಯೆ ಪೂರ್ಣಗೊಂಡಿರುವ ಬೆನ್ನಲ್ಲೇ ಭಾರತೀಯ ಸೇನೆಯು ಶುಕ್ರವಾರ ಡೆಮ್‌ಚೋಕ್‌ನಲ್ಲಿ ಗಸ್ತು ತಿರುಗುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಡೆಪ್ಸಾಂಗ್ ಪ್ರದೇಶದಲ್ಲೂ ಗಸ್ತು ತಿರುಗುವ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಡೆಮ್‌ಚೋಕ್ ಮತ್ತು ಡೆಪ್ಸಾಂಗ್ ಪ್ರದೇಶಗಳಲ್ಲಿ ನಿಯೋಜಿಸಿದ್ದ ಎರಡೂ ದೇಶಗಳ ಸೇನೆಯನ್ನು ಹಿಂದಕ್ಕೆ ಪಡೆಯುವ ಕಾರ್ಯಾಚರಣೆ ಪೂರ್ಣಗೊಂಡ ಬೆನ್ನಲ್ಲೇ ವಾಸ್ತವ ಗಡಿ ನಿಯಂತ್ರಣ ರೇಖೆಯ ಹಲವು ಕಡೆಗಳಲ್ಲಿ ಭಾರತ ಮತ್ತು ಚೀನಾದ ಯೋಧರು ಗುರುವಾರ, ದೀಪಾವಳಿ ಹಬ್ಬದ ಪ್ರಯುಕ್ತ ಸಿಹಿ ವಿನಿಮಯ ಮಾಡಿಕೊಂಡಿದ್ದರು.
ಈಚೆಗೆ ರಷ್ಯಾದ ಕಜಾನ್‌ನಲ್ಲಿ ನಡೆದಿದ್ದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಸೇನೆ ಹಿಂದಕ್ಕೆ ಪಡೆದು ಗಸ್ತು ಆರಂಭಿಸಲು ಇಬ್ಬರೂ ನಾಯಕರು ಸಮ್ಮತಿ ಸೂಚಿಸಿದ್ದರು.
ಪೂರ್ವ ಲಡಾಖ್ ಪ್ರದೇಶಗಳಲ್ಲಿ 2020ರ ಏಪ್ರಿಲ್ ಅವಧಿಗೂ ಹಿಂದಿನ ಪೂರ್ವ ಸ್ಥಿತಿಗೆ ಕಾಯ್ದುಕೊಳ್ಳುವುದಾಗಿ ಮೂಲಗಳು ತಿಳಿಸಿವೆ.