HEALTH TIPS

ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಶೋಧ ಕಾರ್ಯಾಚರಣೆ

 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೆ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಗುಪ್ತಚರ ಮಾಹಿತಿ ಆಧಾರದ ಮೇಲೆ, ಭದ್ರತಾ ಪಡೆಗಳು ಹಾಗೂ ಉತ್ತರ ಕಾಶ್ಮೀರದ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅವರು ಹೇಳಿದರು.

ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಸಿಬ್ಬಂದಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries