ರಾಂಚಿ: ಭಾರತೀಯ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಮರಿ ಮೊಮ್ಮಗ ಮಂಗಲ್ ಮುಂಡಾ ರಸ್ತೆ ಅಫಘಾತದಲ್ಲಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.ಅವರಿಗೆ 45 ವರ್ಷ ವಯಸ್ಸಾಗಿತ್ತು.
ನವೆಂಬರ್ 25ರಂದ ಅವರು ಪ್ರಯಾಣಿಕ ವಾಹನದ ಮೇಲ್ಛಾವಣಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.
ತಕ್ಷಣಕ್ಕೆ ಅವರನ್ನು ರಾಜೇಂದ್ರ ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಚೇರಿ, ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಕಚೇರಿ ಮುಂಡಾ ಅವರ ಚಿಕಿತ್ಸೆಯ ಸಂಬಂಧ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.