ನವದೆಹಲಿ: ಉತ್ತರ ಪ್ರದೇಶದ ಬುಲ್ಡೋಜರ್ ನ್ಯಾಯದ ಸಾಂವಿಧಾನಿಕ ಸಿಂಧುತ್ವದ ಕುರಿತು ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್, ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಮನೆಯನ್ನು ಕೆಡುವುದು ಅಸಂವಿಧಾನಿಕ ಎಂದು ಹೇಳಿದೆ.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವಿದರೆ ಅದು ಸಂಪೂರ್ಣವಾಗಿ ಅಸಂವಿಧಾನಿಕ ಎಂದು ತೀರ್ಪು ನೀಡಿದೆ
ರಾಜ್ಯ ಮತ್ತು ಅಧಿಕಾರಿಗಳು ನಿರಂಕುಶ ಮತ್ತು ಅತಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತಿಲ್ಲ. ಪೂರ್ವಭಾವಿ ಶೋಕಾಸ್ ನೋಟಿಸ್ ನೀಡದೆ ಮತ್ತು ನೋಟಿಸ್ ಜಾರಿ ಮಾಡಿದ 15 ದಿನಗಳ ಒಳಗಾಗಿ ಯಾವುದೇ ಕಟ್ಟಡವನ್ನು ಕೆಡವಬಾರದು ಎಂದು ಪೀಠ ಸೂಚಿಸಿದೆ.
ಸಾರ್ವಜನಿಕ ಭೂಮಿಯಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾದರೆ ಅಂತಹ ಸಮಯದಲ್ಲಿ ನಿರ್ದೇಶನ ಅನ್ವಯವಾಗುವುದಿಲ್ಲ. ಒಂದು ವೇಳೆ ಕಟ್ಟಡ ಕೆಡವಬೇಕಾದ ಅನಿವಾರ್ಯತೆ ಇದ್ದರೆ ಅದರ ಸಂಪೂರ್ಣ ಪ್ರಕ್ರಿಯೆಗಳನ್ನು ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ಕೋರ್ಟ್ ಹೇಳಿದೆ.
ಮನೆಗಳನ್ನು ನೆಲಸಮ ಮಾಡಿರುವುದರ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಕೋರ್ಟ್, ರಾತ್ರೋರಾತ್ರಿ ಮಹಿಳೆಯರು, ಮಕ್ಕಳು ಬೀದಿಯಲ್ಲಿ ನಿಲ್ಲುವುದು ಒಳ್ಳೆಯ ವಿಚಾರವಲ್ಲ ಎಂದು ಅಭಿಪ್ರಾಯಪಟ್ಟಿದೆ.