ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಖನ್ಯರ್ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಸ್ಥಳದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಲಭಿಸಿದ್ದರಿಂದ ಭದ್ರತಾ ಪಡೆಗಳು ಖನ್ಯರ್ ಸ್ಥಳವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಭದ್ರತಾ ಪಡೆಗಳು ತಿರುಗೇಟು ನೀಡಿವೆ.
ಗುಂಡಿನ ಕಾಳಗ ಮುಂದುವರಿದಿದ್ದು, ಉಭಯ ಕಡೆಗಳಿಂದ ಯಾವುದೇ ಸಾವು ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.