ಕಾಸರಗೋಡು: ವಿಶ್ವ ಏಡ್ಸ್ ವಿರುದ್ಧ ದಿನಾಚರಣೆ ಅಂಗವಾಗಿ ಕಾಸರಗೋಡು ಜಿಲ್ಲಾ ಮಟ್ಟದ ಕಾರ್ಯಕ್ರಮ ನವೆಂಬರ್ 30 ರಂದು ಕಾಸರಗೋಡಿನಲ್ಲಿ ಜರುಗಲಿದೆ. ಬೆಳಗ್ಗೆ 8.45ಕ್ಕೆ ಕಾಸರಗೋಡು ಹೊಸ ಬಸ್ ನಿಲ್ದಾಣ ಪ್ರದೇಶದಿಂದ ಮುನ್ಸಿಪಲ್ ಟೌನ್ ಹಾಲ್ ವರೆಗೆ ಏಡ್ಸ್ ಜಾಗೃತಿ ರ್ಯಾಲಿ ನಡೆಯಲಿದೆ.
ಕಾಸರಗೋಡು ಡಿವೈಎಸ್ಪಿ ಸಿ.ಕೆ.ಸುನೀಲಕುಮಾರ್ ರ್ಯಾಲಿಗೆ ಚಾಲನೆ ನೀಡುವರು. ನಂತರ ನಗರಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಸಭೆಯನ್ನು ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸುವರು. ನಗರಸಭಾ ಅದ್ಯಕ್ಷ ಅಬ್ಬಾಸ್ ಬೀಗಂ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ. ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ವಕೀಲೆ ಎಸ್.ಎನ್.ಸರಿತಾ ಪ್ರತಿಜ್ಞಾವಿಧಿ ಬೋಧಿಸುವರು. ಜಿಲ್ಲಾ ವೈದ್ಯಾಧಿಕಾರಿ ಡಾ. ಎ.ವಿ ರಾಮದಾಸ್ ಏಡ್ಸ್ ದಿನದ ಸಂದೇಶ ನೀಡುವರು. ಈ ಸಂದರ್ಭ ಜಾಗೃತಿ ವಿಚಾರ ಸಂಕಿರಣ ನಡೆಯಲಿದೆ. ಸಂಜೆ 6 ಗಂಟೆಗೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ರೆಡ್‍ರಿಬ್ಬನ್ ಮಾದರಿಯಲ್ಲಿ ಕ್ಯಾಂಡಲ್ ಬೆಳಗಿಸಲಾಗುವುದು. ಎಚ್ ಐವಿ ಏಡ್ಸ್ ಜಾಗೃತಿ ಜಾದೂ ಪ್ರದರ್ಶನ ನಡೆಯಲಿದೆ.