HEALTH TIPS

ಶೀಘ್ರದಲ್ಲೇ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ: ಅಮಿತ್ ಶಾ

 ವದೆಹಲಿ: ಭಯೋತ್ಪಾದನೆಯನ್ನು ಮಟ್ಟಹಾಕುವ ಸಂಬಂಧ ಕೇಂದ್ರ ಸರ್ಕಾರ 'ರಾಷ್ಟ್ರೀಯ ಭಯೋತ್ಪಾದನೆ ನಿಗ್ರಹ ನೀತಿ' ಹಾಗೂ ಕಾರ್ಯತಂತ್ರ ರೂಪಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

'ಭಯೋತ್ಪಾದನೆ ನಿಗ್ರಹ ಸಮಾವೇಶ'ದಲ್ಲಿ ಮಾತನಾಡಿದ ಅವರು,'ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಸರ್ಕಾರ ಹೆಚ್ಚು ಕ್ರಿಯಾತ್ಮಕ ಹೆಜ್ಜೆಯನ್ನಿಡಲಿದೆ.

ಮುಂದಿನ ಕೆಲವೇ ತಿಂಗಳಲ್ಲಿ ಈ ಹೊಸ ನೀತಿ ಮತ್ತು ಕಾರ್ಯತಂತ್ರವನ್ನು ಜಾರಿಗೊಳಿಸಲಾಗುವುದು' ಎಂದರು.

'ದೇಶವು ಭಯೋತ್ಪಾದನೆ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ದೃಢವಾದ ಕಾರ್ಯತಂತ್ರದೊಂದಿಗೆ ಹೆಜ್ಜೆ ಹಾಕುತ್ತಿದೆ. ಎಲ್ಲ ರಾಜ್ಯಗಳ ಹಾಗೂ ಕೇಂದ್ರೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಎಲ್ಲ ಸಂಸ್ಥೆಗಳು ಜಂಟಿ ತಂತ್ರಗಳನ್ನು ರೂಪಿಸುವ ಜೊತೆಗೆ ತಮ್ಮಲ್ಲಿನ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳುವುದು ಅಗತ್ಯ' ಎಂದು ಶಾ ಹೇಳಿದರು.

'ಗೃಹ ಸಚಿವಾಲಯ ನೀತಿಗಳನ್ನು ರೂಪಿಸಿ, ಜಾರಿಗೊಳಿಸಬಹುದು. ರಾಜ್ಯಗಳು ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸದಿದ್ದಲ್ಲಿ ಈ ವಿಚಾರದಲ್ಲಿ ಯಶಸ್ಸು ಸಿಗುವುದಿಲ್ಲ' ಎಂದೂ ಹೇಳಿದರು.

ಎರಡು ದಿನಗಳ ಈ ಸಮಾವೇಶ ಶುಕ್ರವಾರ ಅಂತ್ಯಗೊಳ್ಳಲಿದೆ. ಭದ್ರತಾ ಪಡೆಗಳು, ತಂತ್ರಜ್ಞರು, ಕಾನೂನು ತಜ್ಞರು, ವಿಧಿವಿಜ್ಞಾನ ಪರಿಣತರು ಸೇರಿದಂತೆ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ತೊಡಗಿರುವ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.


ಅಮಿತ್‌ ಶಾ ಕೇಂದ್ರ ಗೃಹ ಸಚಿವ
ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ಅಗತ್ಯ ಎಂಬುದನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಭಾರತ ಕೂಡ ಈ ನಿಟ್ಟಿನಲ್ಲಿ ಬಲಿಷ್ಠ ಕಾರ್ಯತಂತ್ರ ಹೊಂದಿದೆ

ಶಾ ಭಾಷಣದ ಪ್ರಮುಖಾಂಶಗಳು

  • ಭಯೋತ್ಪಾದನೆ ವಿರುದ್ಧದ ಹೋರಾಟ ಪೊಲೀಸ್‌ ಠಾಣೆಗಳ ಹಂತದಿಂದ ಆರಂಭವಾಗಬೇಕು. ಈ ಸಂಬಂಧ ಎಲ್ಲ ರಾಜ್ಯಗಳ ಹಿರಿಯ ಪೊಲೀಸ್‌ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು.

  • ಭಯೋತ್ಪಾದನೆ ವಿರುದ್ಧ ಹೋರಾಡುವ ಸಂಸ್ಥೆಗಳಿಗೆ ಕಾನೂನಿನ ಬಲ ತುಂಬುವ ಉದ್ದೇಶದಿಂದ ಎನ್‌ಐಎ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ. ಯುಎಪಿಎಗೂ ತಿದ್ದುಪಡಿ ತರಲಾಗಿದೆ/

  • ಭಯೋತ್ಪಾದಕರಿಗೆ ಹಣಕಾಸು ನೆರವು ಹರಿಯುವುದನ್ನು ತಡೆಯಲು 25 ಅಂಶಗಳ ಯೋಜನೆಯೊಂದನ್ನು ರೂಪಿಸಲಾಗಿದೆ.

  • ಕಾಯ್ದೆಗಳಿಗೆ ತಂದ ತಿದ್ದುಪಡಿಯಿಂದಾಗಿ ಘೋಷಿತ ಭಯೋತ್ಪಾದಕರು ಹಾಗೂ ಉಗ್ರ ಸಂಘಟನೆಗಳು ವಿದೇಶಗಳಲ್ಲಿ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ

  • ಸೈಬರ್‌ ಭದ್ರತೆ ನಾರ್ಕೊ ಭಯೋತ್ಪಾದನೆ ಮೇಲೆ ನಿಗಾ ಇಡುವುದಕ್ಕಾಗಿ 'ಮಲ್ಟಿ ಏಜೆನ್ಸಿ ಸೆಂಟರ್‌' (ಎಂಎಸಿ) ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳ (ಎಸ್‌ಒಪಿ) ವ್ಯಾಪ್ತಿಯನ್ನು ಹೆಚ್ಚಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries