ಕಾಸರಗೋಡು: ಜಿಲ್ಲಾ ವಾರ್ತಾ ಮತ್ತು ಮಾಹಿತಿ ಇಲಾಖೆ ಹಾಗೂ ತಾಲೂಕು ಕಛೇರಿ ಜಂಟಿಯಾಗಿ ಆಯೋಜಿಸಿದ್ದ ಆಡಳಿತ ಭಾಷಾ ಸಪ್ತಾಹದ ಸಮಾರೋಪ ಸಮಾರಂಭ ಕಾಞಂಗಾಡ್ ಮಿನಿ ಸಿವಿಲ್ ಸ್ಟೇಷನ್ನಲ್ಲಿ ಜರುಗಿತು.
ಕಾಞಂಗಾಡ್ ನಗರಸಭೆ ಅಧ್ಯಕ್ಷೆ ಕೆ.ವಿ.ಸುಜಾತಾ ಕಾರ್ಯಕ್ರಮ ಉದ್ಘಾಟಿಸಿದರು. ಹೊಸದುರ್ಗ ತಹಶೀಲ್ದಾರ್ ಟಿ. ಜಯಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಉಪಾಧ್ಯಕ್ಷ ಬಿಲ್ಟೆಕ್ ಅಬ್ದುಲ್ಲಾ, ನಗರಸಭಾ ಕಾರ್ಯದರ್ಶಿ ಮನೋಜ್ ಕುಮಾರ್, ಹಸಿರು ಕೇರಳ ಮಿಷನ್ ಕಾಂಞಂಗಾಡ್ ಬ್ಲಾಕ್ ಸಂಯೋಜಕ ಬಾಲಚಂದ್ರನ್ ಮಾಸ್ಟರ್, ಭೂದಾಖಲೆ ವಿಭಾಗ ಹಶೀಲ್ದಾರ್ ಶಶಿಕುಮಾರ್, ಕಾಞಂಗಾಡು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಕೌನ್ಸಿಲರ್ಗಳು ತಾಲೂಕು ಕಚೇರಿ ನೌಕರರು, ಗ್ರಾಮಾಧಿಕಾರಿಗಳು ಸಿವಿಲ್ ಸ್ಟೇಶನ್ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಮಾಹಿತಿ ಅಧಿಕಾರಿ ಎಂ. ಮಧುಸೂದನನ್ ಸ್ವಾಗತಿಸಿ, ಕೇಂದ್ರ ಕಚೇರಿ ಉಪ ತಹಶೀಲ್ದಾರ್ ಕೆ. ಬಾಬು ವಂದಿಸಿದರು.
ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.
ಜನಪರ, ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ
ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.
ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.
ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.
ಇದು ಗಡಿನಾಡು ಕಾಸರಗೋಡಿನ ಜನಧ್ವನಿ.